‘ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು’- ಡಿಕೆ ಸುರೇಶ್

ಆರ್ ಆರ್ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ಪೂರ್ಣಗೊಂಡಿದ್ದು ಫಲಿತಾಂಶ ಹೊರಬಿದ್ದಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜನ ಸಾಧಿಸಿದ್ದಾರೆ. ಬಿಜೆಪಿ ಪಕ್ಷದ ಅಭ್ಯರ್ಥಿಗಳು ಗೆಲುವಿನ ಬಾವುಟು ಹಾರಿಸುವುದು ಸ್ಪಷ್ಟವಾಗಿ ಗೋಚರಿಸುತ್ತಿದ್ದಂತೆ ಫಲಿತಾಂಶಕ್ಕೂ ಮುನ್ನ ಸಿಎಂ ಯಡಿಯೂರಪ್ಪ ಸಂತಸದಲ್ಲಿ ಸಚಿವರಿಗೆ ಸಿಹಿ ಹಂಚುವ ಮೂಲಕ ಸಂತಸಗೊಂಡರು.

ಆರ್ ಆರ್ ನಗರ ಶಿರಾದಲ್ಲಿ ಡಿಕೆ ಬ್ರದರ್ಸ್ ಹಾಗೂ ಸಿದ್ದರಾಮಯ್ಯ ಕಾರ್ಯತಂತ್ರ ಫಲಕೊಡಲಿಲ್ಲ. 2 ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದ್ದು ಕಾಂಗ್ರೆಸ್ ಮುಖಂಡರಿಗೆ ಮುಖಭಂಗವಾಗಿದೆ.

ಮತದಾರರ ತೀರ್ಪು ಏನೇ ಆಗಿರಲಿ ಅದಕ್ಕೆ ಎಲ್ಲಾ ಪಕ್ಷದ ನಾಯಕರು ತಲೆ ಬಾಗಲೇಬೇಕು. ಈ ಬಗ್ಗೆ ಮಾತನಾಡಿದ ಸಂಸದ ಡಿ.ಕೆ ಸುರೇಶ್ ಟ್ವೀಟ್ ಮಾಡಿದ್ದು, ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಹೇಳಿದ್ದಾರೆ. ಮತದಾರರ ತೀರ್ಪಿಗೆ ಎಲ್ಲರೂ ತಲೆಬಾಗಲೇಬೇಕಿದೆ. ಉಪ ಚುನಾವಣೆಯಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಬೆಂಬಲ ನೀಡಿದ ಪಕ್ಷದ ಎಲ್ಲಾ ನಾಯಕರು, ಕಾರ್ಯಕರ್ತರು ಸೇರಿದಂತೆ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ಹೇಳಿದರು.

ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಫಲಿತಾಂಶವನ್ನು ಗಂಭೀರವಾಗಿ ಪರಿಗಣಿಸಿ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳೋಣ. ಮುಂದೆ ಸಹ ಪಕ್ಷ ಸಂಘಟನೆಯ ಎಲ್ಲಾ ನಾನು ನಿಮ್ಮ ಜೊತೆಗಿರುತ್ತೇನೆ ಎಂದು ಭರವಸೆ ನೀಡಿದರು.

ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಉಪಚುನಾವಣೆಯಲ್ಲಿ ಹೆಚ್ಡಿ ಕುಮಾರಸ್ವಾಮಿ ಅವರಿಗೆ ಬಿಜೆಪಿ ಗೆಲ್ಲಬೇಕೆಂಬ ಬಯಕೆಯಿತ್ತು. ಹಾಗಾಗಿ, ಅವರು ನನ್ನನ್ನು ಟಾರ್ಗೇಟ್ ಮಾಡಿದರು. ಆರ್ ಆರ್ ನಗರದಲ್ಲಿ ಬಿಜೆಪಿ ಜೆಡಿಎಸ್ ಹೊಂದಾಣಿಕೆ ಆಗಿತ್ತು ಅನಿಸುತ್ತದೆ. ಅದಕ್ಕೆ ಜೆಡಿಎಸ್ ಬಹಳ ಮತ ತೆಗೆಕೊಳ್ಳಲಿಲ್ಲ ಎಂದು ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights