ಬೆಂಗಳೂರಿನ ಬಾಪುಜಿ ನಗರದ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ…!

ಮಂಗಳವಾರ ಬೆಂಗಳೂರಿನ ಬಾಪುಜಿ ನಗರದ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೂರು ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

ನಗರದ ಹೊಸ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದ್ದು, ಇಡೀ ರಸ್ತೆಯಲ್ಲಾ ಸಂಪೂರ್ಣ ಹೊಗೆ ತುಂಬಿಕೊಂಡಿದೆ. ಎಷ್ಟೇ ಪ್ರಯತ್ನಿಸಿದರೂ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ. ಬೃಹತ್ ಪ್ರಮಾಣದಲ್ಲಿ ವ್ಯಾಪಿಸಿರುವುದರಿಂದ ಅಕ್ಕ ಪಕ್ಕದ ಮನೆಗಳಿಗೆ ಬೆಂಕಿ ಹೊತ್ತಿಕೊಳ್ಳುತ್ತಿದೆ. ಅಕ್ಕಪಕ್ಕದ ಮನೆಯವರನ್ನು ಸ್ಥಳಾಂತರಿಸಲು ಪೊಲೀಸರು ಮತ್ತಿ ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

ಅಕ್ಕ ಪಕ್ಕದ ವಾಹನಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಬೃಹತ್ ಪ್ರಮಾಣದಲ್ಲಿ ಹರಡಿದ ಬೆಂಕಿಯನ್ನು ನಂದಿಸುವ ಕಾರ್ಯಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಸಾವು ನೋವಿನ ಬಗ್ಗೆ ಇದುವರೆಗೂ ಮಾಹಿತಿ ಲಭ್ಯವಾಗಬೇಕಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights