ಆರ್ ಆರ್ ನಗರ, ಶಿರಾ ಉಪ ಚುನಾವಣೆ ಫಲಿತಾಂಶಕ್ಕೂ ಮುನ್ನ ಸಿಹಿ ಹಂಚಿ ಸಂಭ್ರಮಿಸಿದ ಬಿಎಸ್ವೈ!

ಆರ್ ಆರ್ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಪೆಪಿ ಪಕ್ಷದ ಅಭ್ಯರ್ಥಿಗಳು ಗೆಲುವಿನ ಬಾವುಟು ಹಾರಿಸುವುದು ಸ್ಪಷ್ಟವಾಗಿ ಗೋಚರಿಸುತ್ತಿದ್ದಂತೆ ಸಿಎಂ ಯಡಿಯೂರಪ್ಪ ಸಂತಸದಲ್ಲಿ ಸಚಿವರಿಗೆ ಸಿಹಿ ಹಂಚುವ ಮೂಲಕ ಹರ್ಷಗೊಂಡಿದ್ದಾರೆ.

ಕಾಂಗ್ರೆಸ್ ಮುಖಂಡರು ಭೇಟಿಯಾಗಿ ಹೂಗುಚ್ಚ ಹಾಗೂ ಸಿಹಿ ನೀಡಿ ಪರಸ್ಪರ ಶುಭಾಶಯ ಸಲ್ಲಿಸಿದರು. ಬಿಜೆಪಿ ಗೆಲುವಿನತ್ತ ದಾಪುಗಾಲು ಇಟ್ಟಿದ್ದು ಬಿಜೆಪಿಯಲ್ಲಿ ಸಂಭ್ರದ ಕಳೆ ಮನೆ ಮಾಡಿದೆ. ಬಿಜೆಪಿ ಕಾರ್ಯಕರ್ತರು ಗೆಲುವಿನ ಸಂಭ್ರಮದಲ್ಲಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಜಯ ಸಾಧಿಸುವುದು ದಟ್ಟವಾಗಿದೆ.

ರಾಜರಾಜೇಶ್ವರಿ ನಗರದಲ್ಲಿ 13ನೇ ಸುತ್ತು ಮುಕ್ತಾಯಗೊಂಡಿದ್ದು ಬಿಜೆಪಿ ಅಭಯರ್ಥಿ ಮುನಿರತ್ನ 69,484 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ 36, 299 ಮತಗಳನ್ನು ಪಡೆದುಕೊಂಡರೆ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಕೇವಲ 3906 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಮುನಿರತ್ನ 33,299 ಮತಗಳ ಅಂತರದಲ್ಲಿ ಮುನಿರತ್ನ ಮುನ್ನಡೆ ಸಾಧಿಸಿದ್ದಾರೆ.

ಇನ್ನೂ ಶಿರಾದಲ್ಲಿ 13ನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿಬಿ ಜಯಚಂದ್ರ 33171, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 41642 ಮತ ಗಳಿಸಿದರೆ ಅಮ್ಮಾಜಮ್ಮಾ  20356 ಮತಗಳನ್ನು ಹೊಂದಿದ್ದಾರೆ. ಈ ಮೂಲಕ ಶಿರಾ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 8,471 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಆದರೆ ಮತ ಎಣಿಕ ಕಾರ್ಯ ಇನ್ನೂ ಪೂರ್ಣಗೊಳ್ಳದ ಹಿನ್ನೆಲೆ ಕಾಂಗ್ರೆಸ್ ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆದಿದೆ. ಮತ ಎಣಿಕೆ ಪೂರ್ಣಗೊಳ್ಳುವ ಹೊತ್ತಿಗೆ ಮಹತ್ತ ತಿರುವು ಪಡೆಯುವ ಸಾಧ್ಯತೆ ಕೂಡ ಇದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights