ನವೆಂಬರ್ 17ರಿಂದ ಶಾಲಾ-ಕಾಲೇಜು ಆರಂಭ: ಶಿಕ್ಷಕರು-ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯ!

ಕೊರೊನಾ ಲಾಕ್‌ಡೌನ್‌ನಿಂದಾಗಿ ಬಂದ್‌ ಆಗಿದ್ದ ಶಾಲಾ-ಕಾಲೇಜುಗಳನ್ನು ತೆರೆಯಲು ಡೇಟ್‌ ಫಿಕ್ಸ್‌ ಆಗಿದೆ. ಇದೇ ನವೆಂಬರ್‌ 17ರಿಂದ ಶಾಲಾ-ಕಾಲೇಜುಗಳು ಪುನರಾರಂಭಿಸಲಾಗುತ್ತಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ‌ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಸರ್ಕಾರಿ, ತಾಂತ್ರಿಕ, ಡಿಪ್ಲೊಮೋ, ಅನುದಾನಿತ, ಅನುದಾನರಹಿತ ಕಾಲೇಜು, ವಿಶ್ವವಿದ್ಯಾಲಯ ಮತ್ತು ಖಾಸಗಿ ವಿಶ್ವವಿದ್ಯಾನಿಲಯಗಳನ್ನು ತೆರೆಯಲು ಅನುಮತಿ ನೀಡಲಾಗಿದ್ದು,  ಆಫ್‌ಲೈನ್‌ ತರಗತಿಗಳ ಆರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ನ. 17ರಿಂದ ಭೌತಿಕ ತರಗತಿಗಳು ಆರಂಭಗೊಳ್ಳಲಿದೆ. ತರಗತಿಗಳಿಗೆ ಹಾಜರಾಗಲು ಬಯಸುವ ವಿದ್ಯಾರ್ಥಿಗಳು ಅವರ ಪೋಷಕರಿಂದ ನಿಗದಿತ ನಮೂನೆಯಲ್ಲಿ ಸಹಿ ಹಾಕಿದ ಒಪ್ಪಿಗೆ ಪತ್ರ ಸಲ್ಲಿಸಬೇಕು.

ತರಗತಿಗಳಲ್ಲಿ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ ಮತ್ತು ಕಾಲೇಜಿನಲ್ಲಿ ಲಭ್ಯವಿರುವ ಒಟ್ಟು ಕೊಠಡಿಗಳ ಅನುಸಾರ, ದೈಹಿಕ ಅಂತರ ಕಾಪಾಡಿಕೊಂಡು ತರಗತಿ ವೇಳಾಪಟ್ಟಿ ಸಿದ್ಧಪಡಿಸಬೇಕು ಎಂದು ಸೂಚಿಸಲಾಗಿದೆ.

ಬೋಧನಾ, ಪ್ರಯೋಗಾಲಯ ಮತ್ತು ಪ್ರಾಜೆಕ್ಟ್ ತರಗತಿಗಳನ್ನು ಅವಶ್ಯಕವಿದ್ದಲ್ಲಿ ಪಾಳಿ ವ್ಯವಸ್ಥೆಯ ಮೇರೆಗೆ ನಡೆಸುವುದು.

ಭೌತಿಕ ತರಗತಿಗಳಿಗೆ ಹಾಜರಾಗಲು ಇಚ್ಛಿಸದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕವೇ ತರಗತಿಗಳನ್ನು ನಡೆಸುವುದು. ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಬಯಸದ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಬಗ್ಗೆ ಇರುವ ಅನುಮಾನ ಅಥವಾ ಸಮಸ್ಯೆಗಳನ್ನು ನಿವಾರಿಸುವ ಸಂಬಂಧ ಪ್ರತಿ ದಿನವು ಭೌತಿಕ ತರಗತಿಗಳನ್ನು ನಡೆಸುವುದು.

ತರಗತಿಗಳನ್ನು ನಡೆಸುವಾಗ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಕಾಲೇಜಿನಲ್ಲಿ ಲಭ್ಯವಿರುವ ಒಟ್ಟು ತರಗತಿ ಕೊಠಡಿಗಳ ಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಇಲಾಖೆಯಿಂದ ಹೊರಡಿಸಲಾಗಿರುವ ಮತ್ತು ಪ್ರಸ್ತುತ ಮಾರ್ಗಸೂಚಿಗಳ ಪ್ರಕಾರ ದೈಹಿಕ ಅಂತರವನ್ನು ಕಾಪಾಡಿಕೊಂಡು ಸುರಕ್ಷಿತವಾಗಿ ತರಗತಿಗಳನ್ನು ನಡೆಸಲು ಅವಶ್ಯಕವಿರುವಂತೆ ತರಗತಿ ವೇಳಾ ಪಟ್ಟಿಯನ್ನು ಕಾಲೇಜಿನ ಹಂತದಲ್ಲಿಯೇ ಸಿದ್ದಪಡಿಸಿಕೊಳ್ಳುವುದು.

ಎಲ್ಲಾ ಅಧ್ಯಾಪಕರು ತಮ್ಮ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಕುರಿತು ಮುಂದಿನ ಕನಿಷ್ಠ ಒಂದು ತಿಂಗಳ ಅಧ್ಯಯನ ಸಾಮಗ್ರಿಗಳನ್ನು ಪ್ರತಿ ಸಂಬಂಧಿಸಿದಂತೆ ತಯಾರಿಸಿ ವಿದ್ಯಾರ್ಥಿಗಳಿಗೆ ಟೆಲಿಗ್ರಾಂ/ವಾಟ್ಸಾಪ್/ಇ-ಮೇಲ್ ಮೂಲಕ ಕಡ್ಡಾಯವಾಗಿ ನೀಡುವುದು. ಅಧ್ಯಯನ ಸಾಮಗ್ರಿಗಳು ಇತ್ಯಾದಿಗಳ ರೂಪದಲ್ಲಿ ಇರತಕ್ಕದ್ದು. ಸದರಿ ಅಧ್ಯಯನ ಸಾಮಗ್ರಿಗಳನ್ನು ಕಾಲೇಜಿನ ವೆಬ್‌ಸೈಟ್‌ನಲ್ಲಿ ಕಡ್ಡಾಯವಾಗಿ ಅಪ್‌ಲೋಡ್‌ ಮಾಡತಕ್ಕದ್ದು.

ಇತರೆ ಮಾರ್ಗಸೂಚಿಗಳು ಕಾಲೇಜಿನ ಸಂಪೂರ್ಣ ಕಟ್ಟಡ, ಮುಖ್ಯದ್ವಾರ, ಶೌಚಾಲಯ ಹಾಗೂ ಎಲ್ಲಾ ಕೊಠಡಿಗಳಲ್ಲಿನ ಪೀಠೋಪಕರಣ ಮತ್ತು ಪಠ್ಯಸಾಮಾಗ್ರಿಗಳನ್ನು ಸ್ಯಾನಿಟೈಸ್ ಮಾಡಿಸುವುದು.

ಬೋಧಕರು, ವಿದ್ಯಾರ್ಥಿಗಳು ಹಾಗೂ ಇತರೆ ಸಿಬ್ಬಂದಿ ಕಡ್ಡಾಯವಾಗಿ 3 ದಿನಗಳ ಮುಂಚೆ ಕೋವಿಡ್-19 ‌ ಪರೀಕ್ಷೆಯನ್ನು ಮಾಡಿಕೊಂಡು ಖಿesಣ ಖeಠಿoಡಿಣ ಓegಚಿಣive ಇದ್ದಲ್ಲಿ ಮಾತ್ರ ವಿ‍ಶ್ವವಿದ್ಯಾಲಯ / ಕಾಲೇಜುಗಳಿಗೆ ಹಾಜರಾಗುವುದು.

ಎಲ್ಲಾ ಕಾಲೇಜುಗಳು ತಮ್ಮ ತಮ್ಮ ಸಮೀಪವಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗೊಂದಿಗೆ ಒಚಿಠಿಠಿiಟಿg ಮಾಡಿಕೊಳ್ಳವುದು.

ಪ್ರತಿ ತರಗತಿಯಿಂದ ಒಬ್ಬ ವಿದ್ಯಾರ್ಥಿಯನ್ನು ಗುರುತಿಸಿ ತನ್ನ ಸಹಪಾಠಿಗಳಲ್ಲೇನಾದರು ಕೋವಿಡ್‌ ಗೆ ಸಂಬಂಧಿಸಿದ ಲಕ್ಷಗಳನ್ನು ಕಂಡುಬಂದಲ್ಲಿ ಅದನ್ನು ಕೋವಿಡ್‌ ಕಾರ್ಯಪಡೆ / ಸೆಲ್‌ ಗಮನಕ್ಕೆ ತರುವಂತೆ ಸೂಚಿಸುವುದು.

ಕಾಲೇಜುಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮನೆಯಿಂದಲೇ ಊಟ ಮತ್ತು ಕುಡಿಯುವ ನೀರನ್ನು ಸ್ವತ: ತಂದು ಅವರೇ ಉಪಯೋಗಿಸುವುದು.


ಇದನ್ನೂ ಓದಿ: ಒಂಟಿ ಕಾಲಿನಲ್ಲೇ ಫುಟ್‌‌ಬಾಲ್‌ ಆಡುವ ಬಾಲಕ; ವಿಡಿಯೋ ನೋಡಿ ನೆಟ್ಟಿಗರು ಫಿದಾ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights