ಜಮ್ಮು ಕಾಶ್ಮೀರ ಡಿಡಿಸಿ ಚುನಾವಣೆ: ಗುಪ್ಕರ್‌ ಒಕ್ಕೂಟದೊಂದಿಗೆ ಕಾಂಗ್ರೆಸ್‌ ಸ್ಪರ್ಧೆ ಖಚಿತ!

ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂಬರುವ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಯಲ್ಲಿ ನ್ಯಾ‍‍ಷನಲ್ ಕಾನ್ಫರೆನ್ಸ್‌ (ಎನ್‌ಸಿ) ಪಕ್ಷದಂತಹ ಸಮಾನ ಮನಸ್ಕ ಜಾತ್ಯಾತೀತ ಪಕ್ಷಗಳ ಜೊತೆಗೂಡಿ ಸ್ಪರ್ಧಿಸುವುದಾಗಿ ಕಾಂಗ್ರೆಸ್‌ ಖಚಿತ ಪಡಿಸಿದೆ.

ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಯೊಂದಿಗೆ ಕಾಂಗ್ರೆಸ್‌ ಸ್ಪರ್ಧಿಸಲಿದೆಯೇ ಎಂಬ ಪ್ರಶ್ನೆ ಇತ್ತೀಚೆಗೆ ಮುನ್ನಲೆಗೆ ಬಂದಿತ್ತು. ಇದೀಗ ಎನ್‌ಸಿ ಮತ್ತು ಪಿಡಿಪಿ ಎರಡೂ ಪಕ್ಷಗಳು ಗುಪ್ಕರ್ ಒಕ್ಕೂಟದ ಭಾಗವಾಗಿರುವುದರಿಂದ ಜಂಟಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸುವ ಮೂಲಕ ಡಿಡಿಸಿ ಚುನಾವಣೆಗೆ ಒಟ್ಟಾಗಿ ಸ್ಪರ್ಧಿಸಲು ನಿರ್ಧರಿಸಿದೆ. .

“ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಗಳಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷ ಸೇರಿದಂತೆ ಸಮಾನ ಮನಸ್ಕ ಜಾತ್ಯತೀತ ಪಕ್ಷಗಳೊಂದಿಗೆ ಕಾಂಗ್ರೆಸ್‌ ಚುನಾವಣಾ ಹೊಂದಾಣಿಕೆ ಮಾಡಿಕೊಳ್ಳಲಿದೆ” ಎಂದು ಜೆ&ಕೆ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯ ವಕ್ತಾರ ರವೀಂದರ್ ಶರ್ಮಾ ಹೇಳಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಡಿಡಿಸಿ ಚುನಾವಣೆಯ ನವೆಂಬರ್ 28 ಮತ್ತು ಡಿಸೆಂಬರ್ 19 ರ ನಡುವೆ ಎಂಟು ಹಂತಗಳಲ್ಲಿ ನಡೆಯಲಿದೆ. ಡಿಸೆಂಬರ್ 22 ರಂದು ಮತ ಎಣಿಕೆ ನಡೆಯಲಿದೆ.


Read Also: ಜಮ್ಮುಕಾಶ್ಮೀರ: ವಿಶೇಷ ಸ್ಥಾನಮಾನವನ್ನು ಮರಳಿ ತರಲು ಪ್ರಾದೇಶಿಕ ಪಕ್ಷಗಳ ಮೈತ್ರಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights