ಪುರಸಭೆ ಮಹಿಳಾ ಸದಸ್ಯರನ್ನು ಎಳೆದಾಡಿ ಅಸಭ್ಯ ವರ್ತನೆ ತೋರಿದ ಬಿಜೆಪಿ ಶಾಸಕ…

ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪುರಸಭೆ ಸದಸ್ಯೆ ಚಾಂದಿನಿ ನಾಯ್ಕ್, ಪುರಸಭೆ ಸದಸ್ಯೆ ಸವಿತಾ ಹುರಕಡ್ಲಿ  ಅವರನ್ನು ಶಾಸಕ ಸಿದ್ದು ಸವದಿ ಸೇರಿ ಹಲವಾರು ಪುರುಷರು ಎಳೆದಾಡಿದ ಘಟನೆ ನಡೆದಿದೆ.

ಕಳೆದ ಸೋಮವಾರ 9 -11-2020 ರಂದು ಮಹಾಲಿಂಗಪುರ ಪುರಸಭೆ, ಉಪಾಧ್ಯಕ್ಷರ ಆಯ್ಕೆ ಚುನಾವಣೆ ಸಂದರ್ಭದಲ್ಲಿ ಪುರಸಭೆ ಸದಸ್ಯೆಯನ್ನು ಕೈ ಹಿಡಿದು ಎಳೆದಾಡಿ, ಗೂಂಡಾ ಪ್ರವೃತ್ತಿ ಪ್ರದರ್ಶಿದ್ದ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಅವರು ತಮ್ಮ ಮೇಲಿನ ಆರೋಪವನ್ನು ಅಲ್ಲಗೆಳೆದಿದ್ದಾರೆ. ಅಲ್ಲದೇ ಮಹಿಳಾ ಸದಸ್ಯೆಯ ರಕ್ಷಣೆ ನಾನು ಮುಂದಾಗಿದ್ದೆ ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ ಶಾಸಕರ ಈ ವರ್ತನೆ ವಿರುದ್ಧ ಮಾಜಿ ಸಚಿವೆ ಉಮಾಶ್ರೀ ಕಿಡಿ ಕಾರಿದ್ರು.’ ನಾಲ್ಕು ಬಾರಿ ಆಯ್ಕೆ ಆಗಿ ಹಿರಿಯ ಶಾಸಕರು ಎನಿಸಿಕೊಂಡ ಸಿದ್ದು ಸವದಿ ಜನಪ್ರತಿನಿಧಿಯಾಗಿ ಈ ರೀತಿ ಮಾಡಿದ್ದು ಸರಿಯಲ್ಲ. ಬಿಜೆಪಿ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ’ ಎಂದು ದೂರಿದ್ದಾರೆ.

ನಡೆದಿದ್ದೇನು?

ಮಹಾಲಿಂಗಪುರ ಪುರಸಭೆ, ಉಪಾಧ್ಯಕ್ಷ ಸ್ಥಾನಕ್ಕೆ ಕಳೆದ ಸೋಮವಾರ ಚುನಾವಣೆ ನಡೆದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಚುನಾವಣೆಯಲ್ಲಿ ಮತ ಚಲಾಯಿಸಲು ಪುರಸಭೆ ಸದಸ್ಯೆ ಸವಿತಾ ಹುರಕಡ್ಲಿ ಅವರು ತೆರಳಿದ್ದರು. ಈ ವೇಳೆ ಸವಿತಾ ಕಾಂಗ್ರೆಸ್ ಪರ ಮತ ಚಲಾಯಿಸಲು ತೆರಳಿದ್ದಾರೆಂದು ಮಾಹಿತಿ ಪಡೆದ ಶಾಸಕರು ಸದಸ್ಯೆಯನ್ನು ಎಳೆದಾಡಿ ಗೂಂಡಾ ವರ್ತನೆ ತೋರಿದ್ದಾರೆ. ಮೈ ಕೈ ಮುಟ್ಟಿ ಅಮಾನವೀವಾಗಿ ವರ್ತಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವೇಳೆ ಪೊಲೀಸರು ಇದ್ದರೂ ಈ ಘಟನೆ ನಡೆದಿದೆ. ಬಿಜೆಪಿ ಸಂಖ್ಯಾಬಲ ಹೆಚ್ಚಿಸಲು ಮಹಿಳಾ ಪುಸಭೆ ಸದಸ್ಯೆಯೊಂದಿಗೆ ಅಮಾನವೀಯ ವರ್ತನೆ ಮಾಡಲಾಗಿದೆ ಮತ್ತು ಇವರ ವರ್ತತೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights