ಕನ್ನಡೇತರ ಬ್ಯಾಂಕ್‌ ನೌಕರರಿಗೆ ಕನ್ನಡ ಕಲಿಸಿ; ಇಲ್ಲವೇ ಹೊರಗೆ ಕಳಿಸಿ: ಟಿ.ಎಸ್‌.ನಾಗಾಭರಣ

ರಾಜ್ಯದಲ್ಲಿರುವ ಬಹುತೇಕ ಎಲ್ಲಾ ಬ್ಯಾಂಕ್‌ಗಳು ರಾಜ್ಯ ಸರ್ಕಾರ ಭಾಷಾ ನೀತಿಗಳನ್ನು ಉಲ್ಲಂಘಿಸುತ್ತಿದ್ದು, ಸ್ಥಳೀಯ ಭಾಷೆಗಳಲ್ಲಿ ಗ್ರಾಹಕರೊಂದಿಗೆ ವ್ಯವಹರಿಸುತ್ತಿಲ್ಲ. ಅವರಿಗೆ ಕೂಡಲೇ ಕನ್ನಡೇತರ ಬ್ಯಾಂಕ್‌ ಅಧಿಕಾರಿಗಳಿಗೆ ಕನ್ನಡ ಕಲಿಸಬೇಕು. ಇಲ್ಲವೇ ಅವರನ್ನು ರಾಜ್ಯದಿಂದ ಹೊರ ಕಳಿಸಬೇಕು ಎಂದು  ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಆಗ್ರಹಿಸಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕಿನ ನಿಯಮಾವಳಿಗಳು, ನೇಮಕಾತಿ ಪ್ರಕ್ರಿಯೆ ಹಾಗೂ ಆಡಳಿತದಲ್ಲಿನ ಸಂಪೂರ್ಣ ಕನ್ನಡ ಅನುಷ್ಠಾನ ಕುರಿತು ಸಭೆ ನಡೆಸಿದ ಅವರು, ಬ್ಯಾಂಕುಗಳಲ್ಲಿ ಸಿ ಮತ್ತು ಡಿ ಹುದ್ದೆಯಲ್ಲಿರುವ ಕನ್ನಡ ಬಾರದ ಕನ್ನಡೇತರರ ಮೇಲೆ ಇದೂವರೆವಿಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಬ್ಯಾಂಕರುಗಳ -ಎಸ್.ಎಲ್.ಬಿ.ಸಿ ಸಮಿತಿಗೆ ತಾಕೀತು ಮಾಡಿದ್ದಾರೆ.

ಬ್ಯಾಂಕ್‌ ಹುದ್ದೆಗಳಿಗೆ ನೇಮಕವಾದ ಕನ್ನಡೇತರರು ನೇಮಕಗೊಂಡ 06 ತಿಂಗಳುಗಳ ಒಳಗಾಗಿ ಕನ್ನಡವನ್ನು ಓದಲು ಮತ್ತು ಬರೆಯಲು ಕಲಿತುಕೊಳ್ಳಬೇಕು. ಗ್ರಾಹಕರೊಂದಿಗೆ ಸ್ಥಳೀಯ ಭಾಷೆಯಲ್ಲಿ ಸಂವಹನ ನಡೆಸಬೇಕು. ಆದರೆ, 05-06 ವರ್ಷಗಳಾದರೂ ಕನ್ನಡ ಕಲಿತಿಲ್ಲ, ಅಂತಹ ನೌಕರರ ವಿರುದ್ಧ ಕ್ರಮಕೈಗೊಂಡಿಲ್ಲ. ಈಗಲಾದರೂ ಕನ್ನಡ ಬಾರದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಕನ್ನಡಿಗರ ಕೈ ತಪ್ಪುತ್ತಿವೆ ಬ್ಯಾಂಕಿಂಗ್ ಉದ್ಯೋಗಗಳು; ಮಾತು ತಪ್ಪಿದ ಕೇಂದ್ರ ಸರ್ಕಾರ: ಟಿ ಎಸ್‌ ನಾಗಾಭರಣ ಆರೋಪ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.