ಬೆಂಗಳೂರಿನ ಬಾಪುಜಿ ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡಕ್ಕೆ ಕಾರಣ ಏನು?

ನಿನ್ನೆ ಮಂಗಳವಾರ ಬೆಂಗಳೂರಿನ ಬಾಪುಜಿ ನಗರದ ಹೊಸಗುಡ್ಡದಹಳ್ಳಿಯಲ್ಲಿರುವ ರೇಖಾ ಕೆಮಿಕಲ್ ಫ್ಯಾಕ್ಟರಿಯ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿ ಅವಘಡಕ್ಕೆ ಕಾರಣ ಮಾಲೀಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗುತ್ತಿದೆ.

ನಿನ್ನೆ ನಗರದ ಹೊಸ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದ್ದು, ಇಡೀ ರಸ್ತೆಯಲ್ಲಾ ಸಂಪೂರ್ಣ ಹೊಗೆ ತುಂಬಿಕೊಂಡಿತ್ತು. ಎಷ್ಟೇ ಪ್ರಯತ್ನಿಸಿದರೂ ಬೆಂಕಿ ನಿಯಂತ್ರಣಕ್ಕೆ ಬರುತ್ತಿರಲಿಲ್ಲ. ನೋಡ ನೋಡುತ್ತಿದ್ದಂತೆ ಬೃಹತ್ ಪ್ರಮಾಣದಲ್ಲಿ ಬೆಂಕಿ ವ್ಯಾಪಿಸಿ ಅಕ್ಕ ಪಕ್ಕದ ಮನೆಗಳಿಗೂ ಹೊತ್ತಿಕೊಂಡಿತು. ಅಕ್ಕಪಕ್ಕದ ಮನೆಯವರನ್ನು ಸ್ಥಳಾಂತರಿಸಲು ಪೊಲೀಸರು ಮತ್ತಿ ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸಪಡುವಂತಾಯಿತು.

ಇದಕ್ಕೆ ಮಾಲೀಕ ಸಜ್ಜನ್ ರಾಜ್ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಯಾವುದೇ ಮುನ್ನೆಚ್ಚರಿಕಾ ಕ್ರಮಗಳು ಮತ್ತು ಸುರಕ್ಷತಾ ಕ್ರಮಗಳನ್ನು ಅನುಸರಿಸದ ಕಾರಣದಿಂದ ಬೆಂಕಿ ದುರಂತ ಸಂಭವಿಸಿದೆ ಎನ್ನಲಾಗಿದೆ. ಸದ್ಯ ಮಾಲೀಕ ನಾಪತ್ತೆಯಾಗಿದ್ದಾನೆ.

ಕೆಮಿಕಲ್ ಸಂಗ್ರಹ ಮಾಡಲು ಅನುಮತಿ ಪಡೆಯದೇ ಸಜ್ಜನ್ ರಾಜ್ ಅಕ್ರಮವಾಗಿ ಸಂಗ್ರಹ ಮಾಡಿದ್ದ. ನಿನ್ನೆ ಲಾರಿಯಲ್ಲಿ ಬೆಳಗ್ಗೆ ಲಾರಿಯಲ್ಲಿ ಬ್ಯಾರಲ್ ನಿಂದ ಕೆಮಿಕಲಗಸಗ ಅನ್ನುಪೈಪ್ ಮೂಲಕ ನಾಲ್ವರು ಕಾರ್ಮಿಕರು ಅನ್ ಲೋಡ್ ಮಾಡುತ್ತಿದ್ದಾಗ ಕಿಡಿ ಹೊತ್ತಿಕೊಂಡು ಬೆಂಕಿ ಆವರಿಸಿತ್ತು. ಸಿಗರೇಟ್ ಅಥವಾ ಬೀಡಿ ಯಿಂದ ಬೆಂಕಿ ತಾಗಿದ ಶಂಕೆ ವ್ಯಕ್ತವಾಗಿದೆ. ಈ ಘಟನೆ ನಡೆಯುತ್ತಿದ್ದಂತೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಮಾಲೀಕರು ಎಸ್ಕೇಪ್ ಆಗಿದ್ದಾರೆ.

ಅಕ್ಕ ಪಕ್ಕದ ವಾಹನಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಬೃಹತ್ ಪ್ರಮಾಣದಲ್ಲಿ ಹರಡಿದ ಬೆಂಕಿಯನ್ನು ನಂದಿಸುವ ಕಾರ್ಯಕ್ಕೆ ಪೊಲೀಸರು ಹರಸಾಹಸ ಪಡುವಂತಾಯಿತು. ಸಾವು ನೋವಿನ ಬಗ್ಗೆ ಇದುವರೆಗೂ ಮಾಹಿತಿ ಲಭ್ಯವಾಗಬೇಕಿದೆ.

https://twitter.com/adarshahgd/status/1326093927754035200?ref_src=twsrc%5Etfw%7Ctwcamp%5Etweetembed%7Ctwterm%5E1326093927754035200%7Ctwgr%5Eshare_3&ref_url=https%3A%2F%2Fkannada.news18.com%2Fnews%2Fstate%2Fbangalore-fire-accident-massive-fire-breaks-out-in-bengaluru-chemical-factory-reason-and-details-is-here-sct-485919.html

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights