ಬೆಂಗಳೂರು ಉಪನಗರ ರೈಲು ಯೋಜನೆ: 7438 ಕೋಟಿ ರೂ. ಸಾಲ ಪಡೆಯಲು ಸರ್ಕಾರ ನಿರ್ಧಾರ!

ಹಲವು ವರ್ಷಗಳಿಂದ ಚರ್ಚೆಯಲ್ಲಿರುವ ಬೆಂಗಳೂರು ಉಪನಗರ ರೈಲು ಯೋಜನೆಯನ್ನು ಅನುಷ್ಟಾನಗೊಳಿಸಲು ಸರ್ಕಾರ ನಿರ್ಧರಿಸಿದೆ. ಮೂರು ಹಂಗಳಲ್ಲಿ ಮೂರು ಮಾರ್ಗಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಇದಕ್ಕಾಗಿ 7,438 ಕೋಟಿ ರೂ. ಸಾಲ ಪಡೆಯಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ದೇಶೀಯ ಹಾಗೂ ವಿದೇಶಿ ಅಭಿವೃದ್ಧಿ ಸಂಸ್ಥೆಗಳಿಂದ ಸಾಲದ ರೂಪದಲ್ಲಿ 7,438 ಕೋಟಿ ರೂ. ಸಾಲ ಪಡೆಯಲು ಸಿಎಂ ಬಿಎಸ್‌ವೈ ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಮೊದಲ ಹಂತದಲ್ಲಿ ಬೆಂಗಳೂರು-ದೇವನಹಳ್ಳಿ, ಬೈಯಪ್ಪನಹಳ್ಳಿ-ಚಿಕ್ಕಬಾಣಾವರ ಹಾಗೂ ಕೆಂಗೇರಿ-ವೈಟ್‌ಫೀಲ್ಡ್ ಮಾರ್ಗಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕೇಂದ್ರ ಸರ್ಕಾರವು ಈ ಸಾಲಿನ ಬಜೆಟ್‌ನಲ್ಲಿ 18,621 ಕೋಟಿ ರೂ.ವೆಚ್ಚದಲ್ಲಿ ಯೋಜನೆ ಜಾರಿಗೊಳಿಸುವುದಾಗಿ ಪ್ರಕಟಿಸಿದೆ. ಅಲ್ಲದೆ, ಸಾರ್ವಜನಿಕ – ಖಾಸಗೀ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ 3 ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಖಾಸಗಿ ಕಂಪನಿಗಳು ಮುಂದೆ ಬಂದಿವೆ. ಕೇಂದ್ರ-ರಾಜ್ಯ ಸರ್ಕಾರದ ಪಾಲು ಶೇ.60ರಷ್ಟು (7,438 ಕೋಟಿ ರೂ) ಸಾಲದ ರೂಪದಲ್ಲಿ ಪಡೆಯಲು ಕೇಂದ್ರ ಸರ್ಕಾರ ತಿಳಿಸಿದೆ. ಹೀಗಾಗಿ ಕರ್ನಾಟಕ ರೈಲ್ವೆ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ಮೂಲಕ 7438 ಕೋಟಿ ರೂ. ಸಾಲ ಪಡೆಯಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಮಾಧುಸ್ವಾಮಿ ತಿಳಿಸಿದ್ದಾರೆ.

ರೈಲ್ವೆ ಮತ್ತು ರಾಜ್ಯ ಸರ್ಕಾರಕ್ಕೆ ಸೇರಿದ ಭೂಮಿಯನ್ನು ಎಕರೆಗೆ ರೂ. 1 ರ ಗುತ್ತಿಗೆಗೆ ನೀಡಲು ಉದ್ದೇಶಿಸಲಾಗಿದ್ದು, ಸ್ವಾಧೀನಪಡಿಸಿಕೊಳ್ಳಬೇಕಾದ ಖಾಸಗಿ ಜಮೀನಿನ ವೆಚ್ಚವನ್ನು ರಾಜ್ಯ ಭರಿಸಲಿದೆ. ಈ ಯೋಜನೆ ಆರು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಪೂರ್ಣಗೊಂಡ ಉಪನಗರ ರೈಲು ಯೋಜನೆಯಿಂದ ವರ್ಷಕ್ಕೆ 1,178 ಕೋಟಿ ರೂ.ಆದಾಯ ಬರುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.


ಇದನ್ನೂ ಓದಿ: ರಾಹುಲ್‌ಗಾಂಧಿ ‘ಶಿಕ್ಷಕರನ್ನು ಮೆಚ್ಚಿಸಲು ಚಡಪಡಿಸುವ ವಿದ್ಯಾರ್ಥಿಯಂತೆ, ಆದರೆ ಸಾಮರ್ಥ್ಯವಿಲ್ಲ’: ಬರಾಕ್ ಒಬಾಮ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights