ಹಸಿರು ಪಟಾಕಿಯಿಂದಲೂ ಕಣ್ಣಿಗೆ ಅಪಾಯ: ವೈದ್ಯರ ಎಚ್ಚರಿಕೆ

ಹಸಿರು ಪಟಾಕಿಗಳಲ್ಲೂ ರಸಾಯನಿಕ ಅಂಶ ಇದ್ದು, ಆ ಪಟಾಕಿಗಳಿಂದಲೂ ಕಣ್ಣಿಗೆ ಹಾನಿಯುಂಟಾಗುತ್ತದೆ. ಹಾಗಾಗಿ, ದೀಪಾವಳಿ ದಿನದಂದು ಪಟಾಕಿ ಸಿಡಿಸುವಾಗ ಎಚ್ಚರಿಕೆ ವಹಿಸಿ ಎಂದು ಮಿಂಟೋ ಕಣ್ಣಿನ ಆಸ್ಪತ್ರೆಯ ನಿರ್ದೇಶಕಿ ಡಾ.ಸುಜಾತಾ ರಾಥೋಡ್ ಹೇಳಿದ್ದಾರೆ.

ಹಸಿರು ಪಟಾಕಿಗಳಲ್ಲೂ ರಸಾಯನಿಕ ಮದ್ದು ಇದೆ. ಸಂಪೂರ್ಣವಾಗಿ ಇದು ಹಾನಿ ಉಂಟುಮಾಡುವುದಿಲ್ಲ ಎಂದು ಯಾವುದೇ ಅಧ್ಯಯನ ತಿಳಿಸಿಲ್ಲ. ಈ ಪಟಾಕಿಗಳು ಸಿಡಿಯುವ ರಭಸಕ್ಕೆ ಹಾನಿ ಉಂಟಾಗಲಿದೆ ಎಂದು ಹೇಳಿದರು.

ಪಟಾಕಿಯಿಂದ ಕಣ್ಣಿಗೆ ಹಾನಿಯಾದಲ್ಲಿ ಸ್ವಚ್ಛವಾದ ಕರವಸ್ತ್ರದಿಂದ ಕಣ್ಣನ್ನು ಮುಚ್ಚಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಕಣ್ಣನ್ನು ಉಜ್ಜುವುದು, ನೀರಿನಿಂದ ತೊಳೆದುಕೊಳ್ಳಬಾರದು. ಕೂಡಲೇ ಹತ್ತಿರದ ಕಣ್ಣಿನ ಆಸ್ಪತ್ರೆಗೆ ತೆರಳಿ, ತುರ್ತು ಚಿಕಿತ್ಸೆ ಪಡೆಯಬೇಕು. ಪಟಾಕಿ ಸಿಡಿಸಿದ ಬಳಿಕ ಅದರ ಮೇಲೆ ನೀರು ಹಾಕಬೇಕು. ಇದರಿಂದ ಮಾಲಿನ್ಯದ ಪ್ರಮಾಣ ಕಡಿಮೆಯಾಗುತ್ತದೆ ಎಂದು ತಿಳಿಸಿದರು.

ಪಟಾಕಿ ಸಿಡಿಸುವಾಗ ಮುಖವನ್ನು ದೂರವಿಟ್ಟುಕೊಳ್ಳಬೇಕು, ಐದು ವರ್ಷದೊಳಗಿನ ಮಕ್ಕಳಿಗೆ ಪಟಾಕಿ ಸಿಡಿಸಲು ಬಿಡಬಾರದು. ಮನೆ ಮತ್ತು ವಾಹನ ನಿಲುಗಡೆ ಸ್ಥಳದಲ್ಲಿ ಪಟಾಕಿ ಸುಡಬಾರದು. ಸುಟ್ಟಪಟಾಕಿಗಳನ್ನು ಮನಬಂದಂತೆ ಬಿಸಾಡಬಾರದು. ಸಾಧ್ಯವಾದಷ್ಟು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು, ಪಟಾಕಿ ಸಿಡಿಸುವ ವೇಳೆ ಸಣ್ಣಪುಟ್ಟ ಗಾಯಗಳಾದರೂ ನಿರ್ಲಕ್ಷಿಸದೆ ವೈದ್ಯರಲ್ಲಿ ಚಿಕಿತ್ಸೆ ಪಡೆಯಬೇಕು ಎಂದು ಅವರು ತಿಳಿಸಿದರು.


ಇದನ್ನೂ ಓದಿ: ಹಸಿರು ಪಟಾಕಿ ಬಳಕೆಗೆ ಸರ್ಕಾರ ಒಲವು: ಏನಿದು ಹಸಿರು ಪಟಾಕಿ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights