ಆ ಯಮ್ಮನಿಂದ ಯಾವ ಕೆಲಸವೂ ಆಗಲ್ಲ: ಸಂಸದೆ ಸುಮಲತಾ ವಿರುದ್ಧ ಪ್ರತಾಪ್‌ಸಿಂಹ ಹೇಳಿಕೆ ವೈರಲ್‌

ಮಂಡ್ಯದ ಯಾವುದೇ ಕೆಲಸ ಇದ್ದರೂ ನನಗೆ ಹೇಳಿ. ಆ ಯಮ್ಮ ಏನೂ ಕೆಲಸ ಮಾಡುವುದಿಲ್ಲ. ಆ ಯಮ್ಮನ ನಾನು ಹ್ಯಾಂಡಲ್ ಮಾಡುತ್ತೇನೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಮೈಸೂರು ಕೊಡುಗು ಸಂಸದ ಪ್ರತಾಪ್‌ ಸಿಂಹರವರು ಹೇಳಿದ್ದಾರೆ.

ಪ್ರತಾಪ್ ಸಿಂಹ ಅವರು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದಾಗ ದೂರವಾಣಿ ಕರೆಯೊಂದರಲ್ಲಿ ಮಾತನಾಡಿದ ಅವರ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವಿವಾದವೆಬ್ಬಿಸಿದೆ.

ಸಂಸದ ಪ್ರತಾಪ್ ಸಿಂಹ ಬೆಂಗಳೂರಿಗೆ ತೆರಳುತ್ತಿದ್ದಾಗ ಯಲಿಯೂರು ಬಳಿ ಕಾರ್ಯಕರ್ತರ ಅಹವಾಲು ಸ್ವೀಕರಿಸುತ್ತಿದ್ದರು. ಆ ವೇಳೆ ಕಾರ್ಯಕ್ರಮದ ವೇದಿಕೆಯಲ್ಲಿದ್ದಾಗಲೇ ಸುಮಲತಾ ವಿರುದ್ಧ ಅಧಿಕಾರಿಯೊಬ್ಬರು ಪ್ರತಾಪ್ ಸಿಂಹರವರಿಗೆ ಫೋನ್ ಮಾಡಿ ದೂರು ಹೇಳಿದಾಗ, ಸುಮಲತಾ ವಿರುದ್ಧವೇ ಮಾತನಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ದೇವೇಗೌಡರ ಕುಟುಂಬದವರನ್ನು ಸೋಲಿಸಲು ಸುಮಲತಾ ಅವರನ್ನು ಗೆಲ್ಲಿಸಿದ್ದಾರೆ. ಅವರು ಯಾವ ಕೆಲಸ ಮಾಡುವುದಕ್ಕೂ ಬಿಡುವುದಿಲ್ಲ. ನನ್ನದೊಂದು ಪ್ರಪೋಸಲ್. ಮಂಡ್ಯದ ಯಾವುದೇ ಕೆಲಸ ಇದ್ದರೂ ನನಗೆ ಹೇಳಿ. ಆ ಯಮ್ಮನಾ ನಾನು ಹ್ಯಾಂಡಲ್ ಮಾಡುತ್ತೇನೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಬೆಂಗಳೂರು–ಮೈಸೂರು ದಶಪಥ ಕಾಮಗಾರಿಯ ಬಗ್ಗೆ ಅಧಿಕಾರಿಯೊಬ್ಬರ ಜೊತೆ ಫೋನ್‌ನಲ್ಲಿ ಈ ಸಂಭಾಷಣೆ ನಡೆದಿದ್ದು, ಯಾರೋ ಅದನ್ನು ವಿಡಿಯೋ ಮಾಡಿ ಹರಿಯಬಿಟ್ಟಿದ್ದಾರೆ. ಈ ಕುರಿತು ಸುಮಲತಾರವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ್ದಾರೆ.


ಇದನ್ನೂ ಓದಿ: 2023ಕ್ಕೆ ಪಕ್ಷವನ್ನು ಅಧಿಕಾರಕ್ಕೆ ತಂದೇ ತರುತ್ತೇವೆ; ಅದೇ ನಮ್ಮ ಗುರಿ: ನಿಖಿಲ್ ಕುಮಾರಸ್ವಾಮಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights