ಸ್ಥಾನ ಹಂಚಿಕೆಯಲ್ಲಿ ಭೇದ: ಪಿಡಿಪಿ ತೊರೆದ ಮುಜಾಫರ್ ಹುಸೇನ್ ಬೇಗ್

ಜಮ್ಮು ಕಾಶ್ಮೀರದ ಪ್ರಾದೇಶಿಕ ಪಕ್ಷ, ಪೀಪಲ್ಸ್‌ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ)ಯ ಹಿರಿಯ  ನಾಯಕ, ಜಮ್ಮು-ಕಾಶ್ಮೀರ ಮಾಜಿ ಉಪಮುಖ್ಯಮಂತ್ರಿ ಮುಜಾಫರ್ ಹುಸೇನ್ ಬೇಗ್ ಅವರು ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಪಕ್ಷ ತೊರೆದಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಪರಿಷತ್ (ಡಿಡಿಸಿ) ಚುನಾವಣೆಗೆ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಹಾಗೂ ಪಿಡಿಪಿ ಮೈತ್ರಿ ಮಾಡಿಕೊಂಡಿವೆ. ಚುನಾವಣೆಯಲ್ಲಿ ಸ್ಥಾನ ಹಂಚಿಕೆಗೆ ಸಂಬಂಧಿಸಿದಂತೆ ಅಸಮಾಧಾನಗೊಂಡಿರುವ  ಪಿಡಿಪಿ ನಾಯಕ ಮುಜಾಫರ್ ಹುಸೇನ್ ಬೇಗ್ ಪಕ್ಷ ತೊರೆದಿದ್ದಾರೆ ಎಂದು ವರದಿಯಾಗಿದೆ.

“ಮೈತ್ರಿಯಲ್ಲಿ ಎನ್‌ಸಿ ಅತಿ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.ಇದು ಪಿಡಿಪಿ ಹಿತಾಸಕ್ತಿಗೆ ವಿರುದ್ಧವಾಗಿದೆ. ಆದ್ದರಿಂದ ಪಕ್ಷ ತೊರೆಯುತ್ತಿದ್ದೇನೆ ಎಂದು ಹುಸೇನ್ ಬೇಗ್ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀಕ್ಕೆ ನೀಡಲಾಗಿದ್ದ ಆರ್ಟಿಕಲ್ 370ಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ನಂತರ, ಜಮ್ಮುಕಾಶ್ಮೀರದ ಸಮಾನ ಮನಸ್ಕ ಪಕ್ಷಗಳು ಪೀಪಲ್ಸ್ ಅಲಯನ್ಸ್ ಫಾರ್ ಗುಪ್ಕಾರ್ ಡಿಕ್ಲರೇಷನ್ (ಪಿಎಜಿಡಿ) ಹೆಸರಿನಲ್ಲಿ ಮೈತ್ರಿ ಮಾಡಿಕೊಂಡಿದ್ದು, ಆರ್ಟಿಕಲ್‌ 370ಯನ್ನು ಮರ ಪಡೆಲು ಹೋರಾಟ ನಡೆಸುತ್ತಿವೆ. ಹೀಗಾಗಿ, ಪಿಡಿಪಿ ಹಾಗೂ ಎನ್ ಸಿ ಡಿಡಿಸಿ ಚುನಾವಣೆಯನ್ನು ಒಟ್ಟಾಗಿ ಎದುರಿಸುತ್ತಿವೆ.

ಮೊದಲ ಪಟ್ಟಿಯಲ್ಲಿ 27 ಅಭ್ಯರ್ಥಿಗಳನ್ನು ಹೆಸರನ್ನು ಘೋಷಿಸಲಾಗಿದ್ದು, 21 ಎನ್ ಸಿ ಅಭ್ಯರ್ಥಿಗಳಿದ್ದರೆ, 4 ಪಿಡಿಪಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಸಜಾದ್ ಲೋನ್ ಅವರ ಪಿಸಿ ಪಕ್ಷದ 2 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಇದರಿಂದಾಗಿ ಪಿಡಿಪಿ ಕಡಿಮೆ ಕ್ಷೇತ್ರಗಳನ್ನು ನೀಡಲಾಗಿದ್ದು, ಇದು ಪಕ್ಷದ ಹಿತಾಸಕ್ತಿಗೆ ದಕ್ಕೆಯಾಗುತ್ತದೆ ಎಂದು ಆರೋಪಿಸಿದರುವ ಮುಜಾಫರ್ ಹುಸೇನ್ ಬೇಗ್ ಪಕ್ಷ ತೊರೆದಿದ್ದಾರೆ.


ಇದನ್ನೂ ಓದಿ: ಜಮ್ಮು ಕಾಶ್ಮೀರ ಡಿಡಿಸಿ ಚುನಾವಣೆ: ಗುಪ್ಕರ್‌ ಒಕ್ಕೂಟದೊಂದಿಗೆ ಕಾಂಗ್ರೆಸ್‌ ಸ್ಪರ್ಧೆ ಖಚಿತ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights