ಅಮೆರಿಕಾದಲ್ಲಿ ಹಿಂಸಾಚಾರ: ಟ್ರಂಪ್‌-ಬೈಡನ್‌ ಬೆಂಬಲಿಗರ ನಡುವೆ ಮಾರಾಮಾರಿ!

ಅಮೆರಿಕದ ಅಧ್ಯಕ್ಷೀಯ ಹಾಗೂ ಉಪಾಧ್ಯಕ್ಷೀಯ ಚುನಾವಣೆ ಫಲಿತಾಂಶ ಘೋಷಣೆಯಾಗಿದ್ದು, ಡೆಮಾಕ್ರೆಟಿಕ್‌ ಪಕ್ಷದ ಜೋ ಬೈಡನ್ ಗೆಲುವು ಸಾಧಿಸಿದ್ದಾರೆ. ಆದರೆ, ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಟ್ರಂಪ್‌ ನಾವೇ ಗೆದ್ದಿದ್ದೇವೆ ಎಂದು ಹೇಳುತ್ತಲೇ ಇದ್ದಾರೆ. ಈ ನಡುವೆ ಅಮೆರಿಕಾದಲ್ಲಿ ನಿನ್ನೆ ಹಿಂಸಾಚಾರ ನಡೆದಿದೆ.

ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಜಧಾನಿ ವಾಷಿಂಗ್ಟನ್ ಡಿಸಿಯಲ್ಲಿ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಡೆಮಾಕ್ರೆಟಿಕ್ ಪಕ್ಷದ ಜೋ ಬೈಡನ್ ಬೆಂಬಲಿಗರೂ ಕೂಡ ಸ್ಥಳಕ್ಕೆ ಬಂದಿದ್ದು, ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಇದು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹಿಂಸಾಚಾರಕ್ಕೆ ಕಾರಣವಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮೋಸದ ಚುನಾವಣೆಯನ್ನು ಜನ ಒಪ್ಪುವುದಿಲ್ಲ; ನಾವೇ ಗೆಲ್ಲುತ್ತೇವೆ: ಟ್ರಂಪ್‌

ಬ್ಲ್ಯಾಕ್ ಲೈವ್ಸ್ ಮ್ಯಾಟರ್(ಬಿಎಲ್‌ಎಂ) ಹಾಗೂ ಟ್ರಂಪ್ ಅವರನ್ನು ಬೆಂಬಲಿಸುವ ಪ್ರೌಡ್ ಬಾಯ್ಸ್ ಗ್ರೂಪ್ ನಡುವೆ ಜಟಾಪಟಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನೆಯ ಸಂದರ್ಭದಲ್ಲಿ ಜೋ ಬೈಡನ್‌ ಬೆಂಬಲಿಗರು ‘ರೆಫ್ಯೂಸ್ ಫ್ಯಾಸಿಸಂ(ನಾಜಿವಾದಕ್ಕೆ ತಿರಸ್ಕಾರ) ಘೋಷಣೆಗಳನ್ನು ಕೂಗಿದ್ದಾರೆ. ಇದರಿಂದ ಕೆರಳಿದ ಟ್ರಂಪ್ ಬೆಂಬಲಿಗರು, ಬೈಡನ್ ಸದಸ್ಯರ ಮೇಲೆ ಹಲ್ಲೆ ನಡೆಸಿದರು. ಏಕಾಏಕಿ ಭುಗಿಲೆದ್ದ ಹಿಂಸಾಚಾರದಿಂದ ಸ್ಥಳಧಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಉಭಯ ಬಣಗಳನ್ನು ಸಮಾಧಾನಪಡಿಸಲು ಹರಸಾಹಸಪಡುತ್ತಿದ್ದಾರೆ ಎನ್ನಲಾಗಿದೆ.

ಎರಡೂ ಪಕ್ಷಗಳ ಬೆಂಬಲಿಗರ ನಡುವೆ ನಡೆದ ಜಟಾಪಟಿಯಲ್ಲಿ ಟ್ರಂಪ್-ಬಿಡೆನ್ ಬೆಂಬಲಿಗರು ಗಾಯಗೊಂಡಿದ್ದು, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದ್ದುವರೆಗೂ 10 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ 20 ವರ್ಷದ ಯುಕನೋರ್ವನಿಗೆ ಚಾಕುವಿನಿಂದ ಇರಿಯಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.


ಇದನ್ನೂ ಓದಿ: ರಾಹುಲ್‌ಗಾಂಧಿ ‘ಶಿಕ್ಷಕರನ್ನು ಮೆಚ್ಚಿಸಲು ಚಡಪಡಿಸುವ ವಿದ್ಯಾರ್ಥಿಯಂತೆ, ಆದರೆ ಸಾಮರ್ಥ್ಯವಿಲ್ಲ’: ಬರಾಕ್ ಒಬಾಮ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights