ವಿಜಯೇಂದ್ರರ ವಿಜೃಂಭಣೆಗೆ ಅಭ್ಯಂತರವಿಲ್ಲ; ಆದರೆ, ಗೆಲುವು ಒಬ್ಬರಿಂದ ಅಲ್ಲ: ಸಚಿವ ಈಶ್ವರಪ್ಪ

ಕರ್ನಾಟಕದ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಗೆಲುವಿಗೆ ಸಿಎಂ ಬಿಎಸ್‌ವೈ ಪುತ್ರ ವಿಜಯೇಂದ್ರನೇ ಕಾರಣ ಎಂದು ಮಾಧ್ಯಮಗಳು ಸೇರಿದಂತೆ ಹಲವರು ವಿಜೃಂಭಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ಬಿಜೆಪಿ ಎಂದಿಗೂ ಒಬ್ಬ ವ್ಯಕ್ತಿಯ ಮೇಲೆ ಚುನಾವಣೆ ಮಾಡುವುದಿಲ್ಲ. ಸಂಘಟಿತ ಪ್ರಯತ್ನದಿಂದ ಚುನಾವಣೆ ಮಾಡಿ ಗೆಲುವು ಸಾಧಿಸುತ್ತಿದ್ದೇವೆ. ಆದರೆ, ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ವೈಭವೀಕರಿಸುವ ಕೆಲಸಗಳನ್ನು ಕೆಲವರು ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಪ್ರತಿ ಕ್ಷೇತ್ರಕ್ಕೂ 4-5 ಮಂದಿ ಉಸ್ತುವಾರಿಯಾಗಿ ನಮ್ಮ ನಾಯಕರು ನೇಮಿಸುತ್ತಾರೆ. ಅದೇ ಮಾದರಿಯಲ್ಲಿಯೇ ಶಿರಾ ಹಾಗೂ ರಾಜರಾಜೇಶ್ವರಿ ನಗರಕ್ಕೂ ಉಸ್ತುವಾರಿ ನೇಮಿಸಲಾಗಿತ್ತು. ಶಿರಾದಲ್ಲಿ ಕೆಲಸ ಮಾಡಿದಂತೆಯೇ ರಾಜರಾಜೇಶ್ವರಿ ನಗರದಲ್ಲಿ ಸಚಿವ ಅಶೋಕ್ ಅವರು ಕೆಲಸ ಮಾಡಿದ್ದಾರೆ. ಆದರೆ, ಆ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಕೇವಲ ಶಿರಾ ಬಗ್ಗೆಯಷ್ಟೇ ಮಾತನಾಡುತ್ತಿದ್ದಾರೆ. ಚುನಾವಣೆ ಗೆಲುವಿನಲ್ಲಿ ವಿಜಯೇಂದ್ರ ಅವರ ಪ್ರಯತ್ನವಿಲ್ಲ ಎಂದು ಹೇಳಲಾಗದು. ಆದರೆ, ವೈಭವೀಕರಿಸುವ ಕೆಲಸಗಳಾಗುತ್ತಿದೆ. ಅದಕ್ಕೂ ನನ್ನ ಅಭ್ಯಂತರವಿಲ್ಲ. ಆದರೆ, ಚುನಾವಣೆ ಒಬ್ಬರದೇ ಗೆಲುವಲ್ಲ ಎಂದು ಅವರು ಹೇಳಿದ್ದಾರೆ.

ಆರ್ ಆರ್ ನಗರದಲ್ಲಿ ಸಚಿವ ಅಶೋಕ್, ಅಶ್ವತ್ಥ್ ನಾರಾಯಣ ಎಲ್ಲರೂ ಸಹ ಪ್ರಯತ್ನ ಮಾಡಿದರು. ಪರಿಷತ್​ನಲ್ಲಿ ಸಹ ಅದೇ ಪ್ರಯತ್ನ ಮಾಡಿದೆವು. ಹೀಗಾಗಿ ಎಲ್ಲಾ ಚುನಾವಣೆಯಲ್ಲಿ ಸಹ ನಾವು ಗೆಲುವು ಸಾಧಿಸಿದ್ದೇವೆ. ಇಲ್ಲಿ ವಿಜಯೇಂದ್ರ ಪ್ರಯತ್ನ ಇಲ್ಲ ಅಂತಾ ಹೇಳಲ್ಲ. ಆದರೆ ನೀವು ವೈಭವೀಕರಿಸುತ್ತೀರಿ, ನಾವು ಏನೂ ಮಾಡಕ್ಕಾಗಲ್ಲ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಕನ್ನಡಿಗರ ಹಿತ ಮರೆತ BJP: ಚುನಾವಣೆಗಾಗಿ ಮರಾಠಿಗರ ಅಭಿವೃದ್ಧಿ 50 ಕೋಟಿ ಅನುದಾನ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights