ರೈತ ಹೋರಾಟಗಾರ ಕೊಟ್ಟೂರು ಶ್ರೀನಿವಾಸ್ ನಿಧನ!
ರೈತ ಹೋರಾಟಗಾರ, ಕರ್ನಾಟಕ ರಾಜ್ಯ ರೈತ ಸಂಘದ ಹಾಸನ ಜಿಲ್ಲಾಧ್ಯಕ್ಷರಾದ ಕೊಟ್ಟೂರು ಶ್ರೀನಿವಾಸ್ ಅವರು ನಿನ್ನೆ (ಮಂಗಳವಾರ) ಮಂಗಳೂರಿನಲ್ಲಿ ನಿಧನರಾಗಿದ್ದಾರೆ.
ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರು ಸ್ವಲ್ಪ ದಿನಗಳ ಕಾಲ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಇನ್ನಷ್ಟು ಹದಗೆಟ್ಟಿದ್ದರಿಂದ ಕಳೆದ ತಿಂಗಳು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿದ್ದರು.
ವಾರಗಳ ಹಿಂದೆಯಷ್ಟೇ ತುಸು ಚೇತರಿಸಿಕೊಂಡಿದ್ದ ಅವರು, ನಿನ್ನೆ ಪುನಃ ತೀವ್ರ ಅಸ್ವಸ್ಥಗೊಂಡಿದ್ದರಿಂದ ವೆಂಟಿಲೇಟರ್ ಸಹಾಯದಲ್ಲಿ ಇಡಲಾಗಿತ್ತು. ಮೃತ ಶರೀರವನ್ನು ಹಾಸನಕ್ಕೆ ಕೊಂಡೊಯ್ಯುತ್ತಿದ್ದು, ನಾಳೆ ಮಧ್ಯಾಹ್ನ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಅವರ ಸ್ನೇಹಿತರು ತಿಳಿಸಿದ್ದಾರೆ.
ಶ್ರೀನಿವಾಸ್ ಕೊಟ್ಟೂರು ಹಲವು ದಶಕಗಳಿಂದ ಹೋರಾಟಗಳಲ್ಲಿ ತೊಡಗಿಸಿಕೊಂಡು ರೈತರ ಧ್ವನಿಯಾಗಿದ್ದರು. ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆಯ ಹಾಸನ ಜಿಲ್ಲಾಧ್ಯಕ್ಷರಾಗಿದ್ದ ಇವರು ಒಬ್ಬ ಮಗಳು, ಪತ್ನಿ ಮತ್ತು ಅಪಾರ ಚಳುವಳಿಯ ಒಡನಾಡಿಗಳನ್ನು ಅಗಲಿದ್ದಾರೆ.
ಇದನ್ನೂ ಓದಿ: ಬಿಜೆಪಿಗೆ ಮಾಜಿ ಕೇಂದ್ರ ಸಚಿವ ಜಯಸಿಂಗ್ ರಾವ್ ಗಾಯಕ್‌ವಾಡ್ ಪಾಟೀಲ್ ರಾಜೀನಾಮೆ!