ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆಗೆ 5 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌!

ಆಸ್ತಿ ವಿವರ ಬಹಿರಂಗ ಪಡಿಸದ ಪ್ರಕರಣದಲ್ಲಿ ವಿಚಾರಣೆ ಹಾಜರಾಗುವಂತೆ ಹೈಕೋರ್ಟ್‌ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೆ ನೋಟಿಸ್‌ ನೀಡಿತ್ತು. ನೋಟಿಸ್‌ ನೀಡಿದರೂ ವಿಚಾರಣೆಗೆ ಹಾಜರಾಗದ ಖಂಡ್ರೆ ಅವರಿಗೆ ಹೈಕೋರ್ಟ್‌ 05 ಪಕ್ಷ ದಂಡ ವಿಧಿಸಿ ಅದೇಶ ಹೊರಡಿಸಿದೆ.

ಖಂಡ್ರ ಶಾಸಕರಾದ ನಂತರ ಆಸ್ತಿ ವಿವರ ಬಹಿರಂಗ ಪಡಿಸಿಲ್ಲ. ಹಾಗಾಗಿ ಅವರ ಶಾಸಕತ್ವವನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಸಿ.ಕೆ.ಸಿದ್ರಾಮ ಎಂಬುವವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, ವಿಚಾರಣೆಗೆ ಖಂಡ್ರೆ ಹಾಜರಾಗದೇ ಇರುವುದರಿಂದ 05 ಲಕ್ಷ ದಂಡ ವಿಧಿಸಿದೆ.

ಕಳೆದ ವಿಚಾರಣೆ ವೇಳೆ ಇಂದಿನ ವಿಚಾರಣೆಗೆ ಹಾಜರಾಗಬೇಕು ಎಂದು ಖಂಡ್ರೆಗೆ ಹೈಕೋರ್ಟ್‌ ನೋಟಿಸ್‌ ನೀಡಿತ್ತು.

ಇಂದು ಪ್ರಕರಣದ ವಿಚಾರಣೆ ನಡೆಸುವಂತೆ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೆ ನೋಟಿಸ್ ನೀಡಿದ್ದರೂ, ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಖಂಡ್ರೆಗೆ 5 ಲಕ್ಷ ದಂಡ ವಿಧಿಸಲಾಗಿದೆ.

ಅದೇಶ ಹೊರಡಿಸಿರುವ ಹೈಕೋರ್ಟ್‌, ದಂಡದ ಹಣವನ್ನು ಸಿಎಂ ಕೋವಿಡ್ ನಿಧಿಗೆ ಪಾವತಿಸುವಂತೆ ಸೂಚಿಸಿದೆ.


ಇದನ್ನೂ ಓದಿ: ಮರಾಠ ಅಭಿವೃದ್ಧಿ ನಿಗಮ: ಆದೇಶ ಹಿಂಪಡೆಯದಿದ್ದರೆ ಡಿ.05ಕ್ಕೆ ಕರ್ನಾಟಕ ಬಂದ್‌!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights