ಹಸುಗಳ ರಕ್ಷಣೆಗಾಗಿ ‘ಹಸು ಸಚಿವಾಲಯ’ ರಚಿಸುತ್ತೇವೆ: ಮಧ್ಯಪ್ರದೇಶ ಸರ್ಕಾರ
ರಾಜ್ಯದಲ್ಲಿ ಹಸುಗಳ ರಕ್ಷಣೆಗಾಗಿ ‘ಹಸು ಸಚಿವಾಲಯ’ ರಚಿಸಲು ಮಧ್ಯಪ್ರದೇಶ ಸರ್ಕಾರ ನಿರ್ಧರಿಸಿದೆ.
ರಾಜ್ಯದಲ್ಲಿ “ಹಸುಗಳ ರಕ್ಷಣೆ ಮತ್ತು ಅಭಿವೃದ್ಧಿಗಾಗಿ” ಹಸು ಕ್ಯಾಬಿನೆಟ್ ಸ್ಥಾಪಿಸಲು ನಿರ್ಧರಿಸಲಾಗಿದೆ. ಪಶುಸಂಗೋಪನೆ, ಅರಣ್ಯ, ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ, ಕಂದಾಯ, ಗೃಹ ಮತ್ತು ರೈತ ಕಲ್ಯಾಣ ಇಲಾಖೆಗಳು ಹಸು ಕ್ಯಾಬಿನೆಟ್ನ ಭಾಗವಾಗಿರಲಿವೆ. ಈ ಬಗ್ಗೆ ನವೆಂಬರ್ 22ರಂದು ನಡೆಯುವ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಟ್ವೀಟ್ ಮಾಡಿದ್ದಾರೆ.
प्रदेश में गोधन संरक्षण व संवर्धन के लिए 'गौकैबिनेट' गठित करने का निर्णय लिया गया है।
पशुपालन, वन, पंचायत व ग्रामीण विकास, राजस्व, गृह और किसान कल्याण विभाग गौ कैबिनेट में शामिल होंगे।
पहली बैठक 22 नवंबर को गोपाष्टमी पर दोपहर 12 बजे गौ अभ्यारण, आगर मालवा में आयोजित की जाएगी।
— Shivraj Singh Chouhan (@ChouhanShivraj) November 18, 2020
ಮಹಿಳೆಯರಿಗೆ, ದಲಿತರಿಗೆ, ಅಲ್ಪಸಂಖ್ಯಾತರಿಗೆ ದೇಶದಲ್ಲಿ ರಕ್ಷಣೆ ಇಲ್ಲದಂತಾಗಿದೆ. ದಿನನಿತ್ಯ, ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ, ದಲಿತರ ಹತ್ಯೆ, ಕೋಮುದ್ವೇಷ, ಗಲಬೆಗಳು ನಡೆಯುತ್ತಿವೆ. ಇವುಗಳನ್ನು ನಿಯಂತ್ರಿಸಲು, ಮಹಿಳೆಯರು-ದಲಿತರನ್ನು ರಕ್ಷಿಸಲು ಯಾವುದೇ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗದ ಸರ್ಕಾರಗಳು ಗೋವುಗಳ ರಕ್ಷಣೆ ಎಂದು ಹೇಳಿಕೊಂಡು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿವೆ ಎಂದು ಟೀಕೆಗಳು ವ್ಯಕ್ತವಾಗಿವೆ.
ಇದನ್ನೂ ಓದಿ: ಯುವತಿಯನ್ನು ಜೀವಂತ ಸುಟ್ಟ ದುಷ್ಕರ್ಮಿಗಳು: ಸಂತ್ರಸ್ತೆಯೇ ಹೆಸರು ಹೇಳಿದರೂ ಆರೋಪಿಗಳನ್ನು ಬಂಧಿಸದ ಪೊಲೀಸರು!

