ತಮಿಳುನಾಡಿನಲ್ಲಿ BJP ಬೆಳೆಯಲು ನೆರವಾಗುತಿದ್ಯಾ AIADMK: ಚುನಾವಣಾ ಮೈತ್ರಿ ಸಾಧ್ಯತೆ!
ತಮಿಳುನಾಡಿನ ವಿಧಾನಸಭೆಗೆ 2021ರಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆ ತಂತ್ರ ಎಣೆಯಲು ಬಿಜೆಪಿ ಸಿದ್ದತೆ ನಡೆಸುತ್ತಿದೆ. ಈ ಹಿನ್ನಲೆಯಲ್ಲಿ ನ.21ರಂದು ಕೇಂದ್ರ ಗೃಹಸಚಿವ ಅಮಿತ್ ಶಾ ಚೆನ್ನೈಗೆ ಭೇಟಿ ಕೊಡಲಿದ್ದಾರೆ. ಅಮಿತ್ ಶಾ ಭೇಟಿಯ ಹಿಂದಿನ ದಿನವೇ (ನ.20)ರಂದು ರಾಜ್ಯದಲ್ಲಿ ಅಧಿಕಾರದಲ್ಲಿರುವ ಆಡಳಿತಾರೂಢ AIADMK ಪಕ್ಷದ ಮುಖ್ಯಸ್ಥರ ಸಭೆ ಕರೆದಿರುವುದು ಹಲವು ರೀತಿಯ ಪ್ರಶ್ನೆಗಳಿಗೆ ಕಾರಣವಾಗಿದೆ.
‘ತಮಿಳುನಾಡು ಚುನಾವಣೆ ಬಿಜೆಪಿಗೆ ಪ್ರತಿಷ್ಠೆಯ ವಿಷಯವಾಗಿದ್ದು, ಎಐಎಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದೆ. ಆದರೆ, ಬಿಜೆಪಿಯೊಂದಿಗಿನ ಮೈತ್ರಿಯ ಬಗ್ಗೆ ಎಐಎಡಿಎಂಕೆಯಲ್ಲಿ ಗೊಂದಲಗಳಿದ್ದರೂ, ಪಕ್ಷದ ಎದುರಿಗಿರುವ ಆಯ್ಕೆಗಳು ಕಡಿಮೆ. ಮೈತ್ರಿಗೆ ಬಿಜೆಪಿ ಒಲವು ವ್ಯಕ್ತಪಡಿಸಿದ್ದು, ಬಹುತೇಕ ಅಂತಿಮಗೊಳ್ಳಲಿದೆ. ಅಮಿತ್ ಶಾ ಭೇಟಿಯಲ್ಲಿ ಅದಕ್ಕೊಂದು ಸ್ಪಷ್ಟ ರೂಪು ಸಿಗಲಿದೆ’ ಎಂದು ಎಐಎಡಿಎಂಕೆ ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಭೆ ಕರೆದಿದೆ ಎಂದು ಹೇಳಲಾಗಿದ್ದು, ಸಭೆಯ ಕಾರ್ಯಸೂಚಿ ಏನೆಂದು ಅಧಿಕೃತವಾಗಿ ಬಹಿರಂಗವಾಗಿಲ್ಲ. ಹಾಗಿದ್ದರೂ, ಚುನಾವಣಾಪೂರ್ವ ಮೈತ್ರಿ ಹಾಗೂ ಜನವರಿ ಅಂತ್ಯದ ವೇಳೆಗೆ ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಅವರು ಜೈಲಿನಿಂದ ಬಿಡುಗಡೆ ಆಗುವುದರ ಪರಿಣಾಮದ ಬಗ್ಗೆ ಮಾತುಕತೆ ನಡೆಯುವ ಸಾಧ್ಯತೆಗಳಿವೆ.
15 ವರ್ಷಗಳ ಬಳಿಕ 2019ರಲ್ಲಿ ಬಿಜೆಪಿ-ಎಐಎಡಿಎಂಕೆ ಮೈತ್ರಿ ಮಾಡಿಕೊಂಡಿದ್ದವು. 2021ರಲ್ಲೂ ಅದು ಮುಂದುವರಿಯುವ ಸಾಧ್ಯತೆಗಳಿವೆ. ಎಐಎಡಿಎಂಕೆ ನಾಯಕ ಒ.ಪನ್ನೀರಸೆಲ್ವಂ ಹಾಗೂ ಮುಖ್ಯಮಂತ್ರಿ ಪಳನಿಸ್ವಾಮಿ ಅವರನ್ನು ಅಮಿತ್ ಶಾ ಶನಿವಾರ ಭೇಟಿ ಮಾಡುವ ಸಾಧ್ಯತೆಯಿದೆ.
ಇದನ್ನೂ ಓದಿ: ಕಾಂಗ್ರೆಸ್‌ಗೆ ರಾಹುಲ್ ಗಾಂಧಿ ನಾಯಕತ್ವವು ವಿನಾಶಕಾರಿ ಎಂಬುದು ಮತ್ತೆ ಬಹಿರಂಗವಾಗಿದೆ!