ಕಾಂಗ್ರೆಸ್‌ ನಾಯಕರು ಸಹಕಾರ ನೀಡುತ್ತಿಲ್ಲ; ಹೈಕಮಾಂಡ್‌ಗೆ ಪತ್ರ ಬರೆಯುತ್ತೇನೆ: ಶಾಸಕ ಅಖಂಡ ಶ್ರೀನಿವಾಸ ಮೂರ್ತಿ

ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ ಮತ್ತು ತಮ್ಮ ಮನೆ ಮೇಲೆ ನಡೆದ ದಾಳಿ ಪ್ರಕರಣದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ತಮಗೆ ಬೆಂಬಲ ನೀಡದಿದ್ದರೆ ಕೆಪಿಸಿಸಿ ವಿರುದ್ಧ ಹೈಕಮಾಂಡ್‌ಗೆ ಪತ್ರ ಬರೆಯುವುದಾಗಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹೇಳಿದ್ದಾರೆ.

ನಮಗೆ ಪೊಲೀಸ್ ಇಲಾಖೆ, ನ್ಯಾಯಾಲಯದಿಂದ ನ್ಯಾಯ ಸಿಕ್ಕಿದೆ. ನಮ್ಮ ಮನೆ ಮೇಲಾದ ದಾಳಿ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ನಮಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಬೆಂಬಲ ಇದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದೇನೆ. ಅವರು ನಮ್ಮ ಮನವಿಗೆ ಸ್ಪಂದಿಸಬೇಕು ಎಂದು ಅಖಂಡ ಶ್ರೀನಿವಾಸ ಮೂರ್ತಿ ಹೇಳಿದರು.

ಸಂಪತ್ ರಾಜ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಎಂದು ಮನವಿ ಮಾಡಿದ್ದೇನೆ. ಆದರೆ, ಇಲ್ಲಿಯವರೆಗೂ ಉಚ್ಚಾಟನೆ ಮಾಡಿಲ್ಲ.  ಕೆ.ಜೆ. ಜಾರ್ಜ್ ನಮ್ಮ ಪಕ್ಕದ ಕ್ಷೇತ್ರದವರು. ಅವರು ತಮಗೆ ಸಹಕಾರ ಕೊಡಬೇಕು. ಅವರ ಬಳಿಯೂ ಮನವಿ ಮಾಡುತ್ತೇನೆ. ಕೆಲವು ನಾಯಕರು ನಮಗೆ ಬೆಂಬಲ ನೀಡುತ್ತಿಲ್ಲ. ಶಾಸಕನಾಗಿದ್ದರೂ ತಾವು ಬೀದಿಗೆ ಬಂದಿದ್ದು, ಕೈ ಹಿಡಿಯಿರಿ ಎಂದು ಮನವಿ ಮಾಡಿದ್ದೇನೆ. ಪಕ್ಷದ ಸತ್ಯಶೋಧನಾ ಸಮಿತಿ ಅಧ್ಯಕ್ಷರಾಗಿರುವ ಪರಮೇಶ್ವರ್ ಇದುವರೆಗೂ ಯಾವುದೇ ಮಾತಕತೆ ನಡೆಸಿಲ್ಲ ಎಂದು ಅವರು ದೂರಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್ಸಿಗರಿಂದಲೇ ಕಾಂಗ್ರೆಸ್‌ ದುರ್ಬಲಗೊಳ್ಳುತ್ತಿದೆ: ಮಲ್ಲಿಕಾರ್ಜುನ ಖರ್ಗೆ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights