ಭಾರತದಲ್ಲಿ 90.5 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ : ಸಾವಿನ ಸಂಖ್ಯೆ 1,32,726ಕ್ಕೇರಿಕೆ!

24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 46,232 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ ಶನಿವಾರ ಬೆಳಿಗ್ಗೆ 90.5 ಲಕ್ಷ ದಾಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ 46,232 ಹೊಸ ಕೊರೊನಾವೈರಸ್ ಸೋಂಕುಗಳೊಂದಿಗೆ ಒಟ್ಟು 90,50,598 ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಯಲ್ಲಿ  ಕೊರೊನಾಗೆ 564 ಜನ ಬಲಿಯಾಗಿದ್ದು ಈವರೆಗೆ ಒಟ್ಟು 1,32,726 ಜನ ಸೋಂಕಿಗೆ ಬಲಿಯಾಗಿದ್ದಾರೆ.

ಶನಿವಾರ ಬೆಳಿಗ್ಗೆ ವೇಳೆಗೆ ಭಾರತದಲ್ಲಿ ಸಕ್ರಿಯ ಪ್ರಕರಣಗಳು 4,39,747 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತೋರಿಸುತ್ತವೆ. ಇದುವರೆಗೆ 84,78,124 ಭಾರತೀಯರು ಕೋವಿಡ್ -19 ನಿಂದ ಚೇತರಿಸಿಕೊಂಡಿದ್ದಾರೆ.

ಭಾರತ ಈವರೆಗೆ 13,06,57,808 ಮಾದರಿಗಳನ್ನು ಪರೀಕ್ಷಿಸಿದೆ. ನವೆಂಬರ್ 20 ರಂದು ಭಾರತದಾದ್ಯಂತ 10,66,022 ಕೊರೊನವೈರಸ್ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.

28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 20,000 ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights