ದೇಶದಲ್ಲಿ ಮುಂದುವರೆದ ಕೊರೊನಾ ಹಾವಳಿ : ಒಂದೇ ದಿನ 45,209 ಕೇಸ್..!

ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಕಳೆದ 24 ಗಂಟೆಗಳಲ್ಲಿ 45,209 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಈವರೆಗೆ ಭಾರತದಲ್ಲಿ ಕೊರೊನಾವೈರಸ್ ಪ್ರಕರಣಗಳು 90.95 ಲಕ್ಷಕ್ಕೆ ಏರಿದೆ.

45,209 ಹೊಸ ಕೊರೊನಾವೈರಸ್ ಪ್ರಕರಣಗಳ ಹೆಚ್ಚಳದೊಂದಿಗೆ ಭಾರತದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 90,95,807 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ಒಟ್ಟು 501 ಜನರು ಕೊರೋನವೈರಸ್ ಸೋಂಕಿಗೆ ಬಲಿಯಾಗಿದ್ದು, ದೇಶದಲ್ಲಿ ಸಾವಿನ ಸಂಖ್ಯೆ 1,33,227 ಕ್ಕೆ ತಲುಪಿದೆ. ಭಾನುವಾರದ ಹೊತ್ತಿಗೆ ಭಾರತದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು 4,40,962 ತಲುಪಿದೆ. ಆರೋಗ್ಯ ಸಚಿವಾಲಯದ ಪ್ರಕಾರ, ಒಂದೇ ದಿನದಲ್ಲಿ 43,493 ಜನ ಡಿಸ್ಚಾರ್ಜ್ ಆಗಿದ್ದಾರೆ.

ಭಾರತದಲ್ಲಿ ಮೊದಲ ಕೊರೊನಾವೈರಸ್ ಪ್ರಕರಣ ಪತ್ತೆಯಾದಾಗಿನಿಂದ, ದೇಶದಲ್ಲಿ 13,17,33,134 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಭಾನುವಾರ ತಿಳಿಸಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights