ಉಪಚುನಾವಣೆಗೆ JDS ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ವ್ಯರ್ಥ: ಹೆಚ್‌ಡಿಕೆ

ಕರ್ನಾಟಕದಲ್ಲಿ ಇನ್ನೂ ಮಸ್ಕಿ ಮತ್ತು ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್‌ನಿಂದ ಅಭ್ಯರ್ಥಿಗಳನ್ನು ಹಾಕುವುದು ವ್ಯರ್ಥ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಮಂಡ್ಯ, ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪ ಚುನಾವಣೆಗಳಲ್ಲಿ ಜೆಡಿಎಸ್‌ದ ಹೀನಾಯ ಸೋಲು ಕಂಡ ಬಳಿಕ ಹೆಚ್‌ಡಿಕೆ ಈ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ.

ಇತ್ತೀಚೆಗೆ ನಡೆದ ಉಪಚುನಾವಣೆಗಳಲ್ಲಿ ಜೆಡಿಎಸ್‌ ಸೋಲನ್ನು ಅಭವಿಸಿರುವುದರಿಂದಾಗಿ ಪಕ್ಷಕ್ಕೆ ಮತ್ತಷ್ಟು ಸವಾಲು ಎದುರಾಗಿದೆ. ಪಕ್ಷವನ್ನು ಮತ್ತಷ್ಟು ಗಟ್ಟಿಯಾಗಿ ಕಟ್ಟಲು, ಪುನಶ್ಚೇತನಗೊಳಿಸಲು ಕಾರ್ಯಕರ್ತರು ಹುರುಪಿನಿಂದ ಕೆಲಸ ಮಾಡಲು ಸಿದ್ದರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಚುನಾವಣೆಗಳಲ್ಲಿ ವ್ಯರ್ಥ ಕಸರತ್ತು ಹಾಕುವುದು ಸರಿಯಲ್ಲ. ಆದರೂ ಆ ಎರಡೂ ಕ್ಷೇತ್ರಗಳ ಮುಖಂಡರು, ಕಾರ್ಯಕರ್ತರ ಜೊತೆಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಪಕ್ಷ ಸಂಘಟನೆ ಚೆನ್ನಾಗಿಯೇ ಇದೆ. ಉಪ ಚುನಾವಣೆಗಳಲ್ಲಿ ಈಗ ಬಿಜೆಪಿಯ ವಿಧಾನವೇ ಬೇರೆ ಇದೆ. ಇಂಥ ಸಂದರ್ಭದಲ್ಲಿ ನಾವು ಉಪ ಚುನಾವಣೆ ಗೆಲ್ಲೋದು ಕಷ್ಟವೇ ಆಗಿದೆ. ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಹಣ ಹಾಗೂ ಅಧಿಕಾರ ಬಲದಿಂದ ಬಿಜೆಪಿ ಗೆಲುವು ಸಾಧಿಸಿದೆ ಎಂದು ಅವರು ಹೇಳಿದರು.


ಇದನ್ನೂ ಓದಿ: ತೇಜಸ್ವಿ ಯಾದವ್ ವಿರುದ್ಧ ಭ್ರಷ್ಟಾಚಾರ ಪ್ರಕರಣಗಳಿವೆ; ವಿಪಕ್ಷ ನಾಯಕರಾಗಬಾರದು: ಜೆಡಿಯು

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights