ಡ್ರಗ್ಸ್‌ ಆರೋಪಿಗಳೊಂದಿಗೆ ಪೊಲೀಸರು ಶಾಮೀಲು:‌ ಕಾನ್ಸ್‌ಟಬಲ್‌ ಬಂಧನ!

ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳಿಗೆ ಸಹಕರಿಸಿದ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರನ್ನು ಬಂಧಿಸಲಾಗಿದೆ ಎಂದು ಕೇಂದ್ರೀಯ ಅಪರಾಧ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

“ಬೆಂಗಳೂರಿನ ಸದಾಶಿವನಗರದ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಒಬ್ಬರನ್ನು ಕೆ.ಜಿ.ನಗರದ ಡ್ರಗ್ಸ್ ಪ್ರಕರಣದಲ್ಲಿ ಆರೋಪಿಗೆ ಸಹಾಯ ಮಾಡಿದ್ದಾರೆ ಎಂಬ ಕಾರಣಕ್ಕೆ ಬಂಧಿಸಲಾಗಿದೆ ಎಂದು ಕೇಂದ್ರೀಯ ಅಪರಾಧ ವಿಭಾಗದ ಅಧಿಕಾರಿಗಳು ಹೇಳಿದ್ದಾರೆ” ಎಂದು ಎಎನ್‌ಐ ವರದಿ ಮಾಡಿದೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಖ್ಯಾತ ಹಾಸ್ಯ ಕಲಾವಿದೆ ಭಾರತಿ ಸಿಂಗ್ ಅವರನ್ನು ಮಾದಕ ವಸ್ತು ನಿಯಂತ್ರಣ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದರು. ನಂತರ ಆಕೆಯ ಪತಿಯನ್ನೂ ಸಹ ಬಂಧಿಸಲಾಗಿದೆ. ಅವರ ಮನೆಯನ್ನು ಅಧಿಕಾರಿಗಳು ಶೋಧಿಸುವ ವೇಳೆ ಗಾಂಜಾ ಪತ್ತೆಯಾಗಿತ್ತು.

ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ಈ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಸಿಬಿ ಅಧಿಕಾರಿಗಳು ಬಾಲಿವುಡ್‌ ಅನ್ನು ಗುರಿಯಾಗಿಸಿಕೊಂಡು ಅನೇಕ ನಟ-ನಟಿಯರ ಮನೆಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿ ರಾಗಿಣಿ ಮತ್ತು ಸಂಜನಾ ಅವರು ಇನ್ನೂ ಬಂಧನದಲ್ಲಿದ್ದಾರೆ.


ಇದನ್ನೂ ಓದಿ: 2021ರ ಸರ್ಕಾರಿ ರಜೆಗಳ ಪಟ್ಟಿ ಪ್ರಟಿಸಿದ ರಾಜ್ಯ ಸರ್ಕಾರ: ಎಷ್ಟಿವೆ ಗೊತ್ತಾ ಸಾರ್ವತ್ರಿಕ ರಜೆಗಳು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights