ರಾಜಕೀಯ ತೊರೆದು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ; ಬಿಜೆಪಿ ಸೇರುವುದಿಲ್ಲ: ಸೌಗತ್‌ ರಾಯ್

ಪಶ್ಚಿಮ ಬಂಗಾಳದಲ್ಲಿ ಅಧಿಕಾರದಲ್ಲಿರುವ ತೃಣಮೂಲ ಕಾಂಗ್ರೆಸ್‌ನ ಐವರು ಸಂಸದರು ತಮ್ಮ ಪಕ್ಷಕ್ಕೆ ರಾಜಿನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಕೆಲವು ಬಿಜೆಪಿ ನಾಯಕರು ಗಾಳಿಸುದ್ದಿ ಹಬ್ಬಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟಿಎಂಸಿ ಸಂಸದ ಸೌಗತ್‌ ರಾಯ್, ಆತ್ಮಹತ್ಯೆ ಬೇಕಿದ್ದರೂ ಮಾಡಿಕೊಳ್ಳುತ್ತೇನೆ, ಬಿಜೆಪಿ ಸೇರುವುದಿಲ್ಲ ಎಂದು ಹೇಳಿದ್ದಾರೆ.

ಟಿಎಂಸಿ ಪಕ್ಷದ ಅನುಭವಿ, ಸೌಗತ ರಾಯ್ ಸೇರಿದಂತೆ ದೊಡ್ಡ ನಾಯಕರೇ ಯಾವುದೇ ಕ್ಷಣದಲ್ಲಿ ತಮ್ಮ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಬರಬಹುದು ಎಂದು ಬಿಜೆಪಿ ಸಂಸದ ಅರ್ಜುನ್ ಸಿಂಗ್ ಕೆಲ ದಿನಗಳ ಹಿಂದೆ ಹೇಳಿಕೆ ನೀಡಿದ್ದರು.

ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂಸದ ಸೌಗತ ರಾಯ್, ಇದೊಂದು ಬಿಜೆಪಿ ಪ್ರಚಾರದ ಕಲೆ. ಅರ್ಜುನ್ ಸಿಂಗ್ ಈ ರೀತಿ ಆರೋಪಿಸುವುದರಲ್ಲಿ ಪ್ರಸಿದ್ಧ ಬಾಹುಬಲಿ. ನಾನು ರಾಜಕೀಯ ತೊರೆದು ಸಾಯಲು ಸಿದ್ಧ ಆದರೆ, ಎಂದಿಗೂ ಬಿಜೆಪಿಗೆ ಸೇರುವುದಿಲ್ಲ ಅವರ ಜೊತೆ . ಕೈ ಜೋಡಿಸುವುದಿಲ್ಲ. ಮೇಲಾಗಿ ನಾನು ಮಾರಾಟವಾಗುವ ಸರಕು ಅಲ್ಲ ಎಂದೂ ಅವರು ಪ್ರತ್ಯುತ್ತರ ನೀಡಿದ್ದಾರೆ.


ಇದನ್ನೂ ಓದಿ: ತೇಜಸ್ವಿ ಯಾದವ್ ವಿರುದ್ಧ ಭ್ರಷ್ಟಾಚಾರ ಪ್ರಕರಣಗಳಿವೆ; ವಿಪಕ್ಷ ನಾಯಕರಾಗಬಾರದು: ಜೆಡಿಯು

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights