ಆರ್‌ಎಸ್‌ಎಸ್‌ ಅಂತರ್‌ಧರ್ಮೀಯ ವಿವಾಹಗಳನ್ನು ವಿರೋಧಿಸುವುದಿಲ್ಲ: ರತನ್ ಶಾರದಾ

ಸಂಘಪರಿವಾರವು ಅಂತರ್‌ಧರ್ಮೀಯ ವಿವಾಹವನ್ನು ವಿರೋಧಿಸುವುದಿಲ್ಲ. ವಿಶೇಷ ವಿವಾಹ ಕಾಯ್ದೆಯಡಿ ಅಂತರ ಧರ್ಮ ವಿವಾಹಗಳನ್ನು ನೋಂದಾಯಿಸಿಕೊಳ್ಳಬೇಕು. ಇದರಿಂದ ಮಹಿಳೆಯರಿಗೆ ಸಮಾನ ಹಕ್ಕುಗಳು ದೊರೆಯುತ್ತವೆ ಎಂದು ಆರ್‌ಎಸ್‌ಎಸ್ ಮಾಧ್ಯಮ ತಂಡದ ಸದಸ್ಯರಾದ ರತನ್ ಶಾರದಾ ಹೇಳಿದ್ದಾರೆ.

ಆರ್‌ಎಸ್‌ಎಸ್‌ ಅಂತರ್‌ಧರ್ಮೀಯ ವಿವಾಹಗಳನ್ನು ವಿರೋಧಿಸುವುದಿಲ್ಲ. ಆದರೆ, ಅಂತರ್‌ಧರ್ಮೀಯ ವಿವಾಹಗಳ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳನ್ನು ವಿರೋಧಿಸುತ್ತದೆ. ಮಹಿಳೆಯರನ್ನು ಒತ್ತಾಯ ಪೂರ್ವಕವಾಗಿ ವಿವಾಹವಾಗುವುದು. ಅಂತರ್‌ಧರ್ಮೀಯ ವಿವಾಹದ ಹೆಸರಿನಲ್ಲಿ ಒತ್ತಾಯಮಾಡಿ ಮಹಿಳೆಯರನ್ನು ಪತಿ ತನ್ನ ಧರ್ಮಕ್ಕೆ ಮತಾಂತರ ಮಾಡುವುದನ್ನು ಆರ್‌ಎಸ್‌ಎಸ್‌ ವಿರೋಧಿಸುತ್ತದೆ ಎಂದು ಅವರು ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿ: ಒಂದೂ ಸ್ಥಾನ ಗೆಲ್ಲದ ತಮಿಳುನಾಡಿನಲ್ಲಿ ಖಾತೆ ತೆರೆಯಲು ಹಪಾಹಪಿಸುತ್ತಿದೆ ಬಿಜೆಪಿ !

ಒತ್ತಾಯಪೂರ್ವಕವಾಗಿ ಮತಾಂತರ ಮಾಡುವುದು ಮಹಿಳೆಯರ ಹಕ್ಕುಗಳನ್ನು ಕಸಿದುಕೊಂಡಂತಾಗುತ್ತದೆ. ಅಂತರ್‌ಧರ್ಮೀಯ ವಿವಾಹಗಳನ್ನು ವಿಶೇಷ ವಿವಾಹ ಕಾಯ್ದೆಯ ಅಡಿಯಲ್ಲಿ ನೊಂದಾಯಿಸಿಕೊಳ್ಳಬೇಕು. ಇದರಿಂದ ಮಹಿಳೆಯರಿಗೆ ಆಸ್ತಿ ಹಕ್ಕು ಸೇರಿದಂತೆ ಸಮಾನ ಹಕ್ಕುಗಳು ದೊರೆಯುತ್ತವೆ ಎಂದು ಅವರು ತಿಳಿಸಿದ್ದಾರೆ.

ಅಂತರಧರ್ಮೀಯ ಮದುವೆಯಲ್ಲಿ ಮಹಿಳೆಯರು ಮೋಸ ಹೋದ ಪ್ರಕರಣಗಳು ಸಾಕಷ್ಟಿವೆ. ಹಲವು ವಿವಾಹಗಳು ಯೋಜಿತ ಮತಾಂತರ ಭಾಗವಾಗಿರುತ್ತವೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಆರ್‌ಎಸ್‌ಎಸ್‌ಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ: ಸಚಿವ ಆರ್‌ ಅಶೋಕ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights