ಸಾ. ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಹಂಚಿಕೊಂಡರೆ 05 ವರ್ಷ ಜೈಲು: ಕೇರಳ ಸರ್ಕಾರ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು, ದ್ವೇಷ ಹರಡುವ ಪೋಸ್ಟ್‌-ವಿಡಿಯೋಗಳ ಹಾವಳಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೊಷಿಯಲ್‌ ಮೀಡಿಯಾದಲ್ಲಿ ಯಾವುದೇ ರೀತಿಯ ಆಕ್ಷೇಪಾರ್ಹ ಅಥವಾ ಬೆದರಿಕೆಯೊಡ್ಡುವಂತಹ ಪೋಸ್ಟ್‌ಗಳನ್ನು ಪ್ರಕಟಿಸಿದರೆ ಅಥವಾ ಹಂಚಿಕೊಂಡರೆ, ಅಂತವರಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಲು ಕೇರಳ ಸರ್ಕಾರ ಹೊಸ ಕಾನೂನು ಜಾರಿಗೆ ತಂದಿದೆ.

ಜನರ ಮನಸ್ಸಿನಲ್ಲಿ ದ್ವೇಷವನ್ನು ಮೂಢಿಸುವ, ಅಪರಾಧಕ್ಕೆ ಪ್ರೇರೇಪಿಸುವ ಅಥವಾ ಯಾರಿಗಾದರೂ ಬೆದರಿಕೆಯೊಡ್ಡುವ ಸಂದೇಶವನ್ನು ಯಾವುದೇ ಮಾಧ್ಯಮದ ಮೂಲಕ ಪೋಸ್ಟ್‌ಮಾಡುವುದು, ಹಂಚಿಕೊಳ್ಳುವುದು, ಫಾರ್ವರ್ಡ್‌ ಮಾಡುವುದು ಅಪರಾಧವೆಂದು ಪರಿಗಣಿಸಲಾಗುತ್ತದೆ.

ಅಂಥವರಿಗೆ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 10,000 ರೂ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿದೆ. ಕೇರಳ ಪೊಲೀಸ್ ಕಾಯ್ದೆಗೆ ಪರಿಚ್ಛೇದ (118 A)ಅನ್ನು ಹೊಸದಾಗಿ ಸೇರಿಸಲಾಗಿದೆ.

ಶಿಕ್ಷೆ ವಿಧಿಸಲು ಅವಕಾಶವಿರುವ ಪರಿಚ್ಛೇದ (118 A)ರ ಸುಗ್ರೀವಾಜ್ಞೆಗೆ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರು ಸಹಿ ಹಾಕಿದ್ದಾರೆ.

ಈ ಕಾನೂನು ಮಾಧ್ಯಮ ಸ್ವಾತಂತ್ರ್ಯ ಹತ್ತಿಕ್ಕಲು ಬಳಕೆಯಾತ್ತದೆ ಎಂದು ಹಲವರು ಆತಂಕ ವ್ಯಕ್ತವಾಗಿದ್ದು, ಹೊಸ ಕಾನೂನಿಗೆ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈಯಕ್ತಿಕ ನಿಂದನೆ ಹೆಚ್ಚಾಗುತ್ತಿದೆ. ಈ ಪ್ರವೃತ್ತಿಗೆ ಕಡಿವಾಣ ಹಾಕಲು ಕಾನೂನು ಬೇಕಿತ್ತು. ಹಾಗಾಗಿ ಈ ಕಾನೂನು ಜಾರಿಯಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸಮರ್ಥಿಸಿಕೊಂಡಿದ್ದಾರೆ.


ಇದನ್ನೂ ಓದಿ: Facebook ಬಳಕೆದಾರರು ದ್ವೇಷಭಾಷಣಗಳ ವೀಕ್ಷಣೆಯಲ್ಲಿ ಹೆಚ್ಚು ಆಸಕ್ತರು: ಫೇಸ್‌ಬುಕ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights