ದೇಶದ ಒಂದೇ ದಿನ 37,975 ಹೊಸ ಕೊರೊನಾ ಕೇಸ್ : ಸೋಂಕಿತರ ಸಂಖ್ಯೆ 91,77,841ಕ್ಕೇರಿಕೆ!

ದೇಶದಲ್ಲಿ ಒಂದೇ ದಿನ 37,975 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 91,77,841ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಒಂದೇ ದಿನ ದೇಶಾದ್ಯಂತ 37,975 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 91,77,841ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶಾದ್ಯಂತ 480 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ  ಬಲಿಯಾದವರ ಸಂಖ್ಯೆ 1,34,218ಕ್ಕೆ ಏರಿಕೆಯಾಗಿದೆ.

ಇನ್ನು ನಿನ್ನೆ ಒಂದೇ ದಿನ 42,314 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 86,04,955ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಪ್ರಸ್ತುತ 4,38,667 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights