ಸಮಸ್ಯೆ ಹೇಳಲು ಬಂದ ಗ್ರಾಮಸ್ಥನನ್ನು ನೂಕಿದ ಬಿಜೆಪಿ ಸಂಸದ ಶಿವಕುಮಾರ್ ಉದಾಸಿ..!

ಗ್ರಾಮದ ಸಮಸ್ಯೆಗಳನ್ನು ಬಗೆಹರಿಸುವಂತೆ ಜನ ನಾಯಕರ ಬಳಿಕೆ ಹೋಗುವ ಕಾಲದಲ್ಲಿ ಜನಪ್ರತಿನಿಧಿಗಳು ಗ್ರಾಮಕ್ಕೆ ಆಗಮಿಸಿದಾಗ ಸಮಸ್ಯೆಗಳನ್ನು ಹೇಳಲು ಜನ ಮುಗಿಬೀಳುವುದು ಸಾಮಾನ್ಯ. ಇಂಥಹ ಸಂದರ್ಭದಲ್ಲಿ ಜನನಾಯಕರು ತಾಳ್ಮೆಯಿಂದ ವರ್ತಿಸುವುದು ಮುಖ್ಯವಾಗಿರುತ್ತದೆ. ಆದರೆ ಸಮಸ್ಯೆ ಹೇಳಲು ಬಂದಿದ್ದ ಗ್ರಾಮಸ್ಥರ ಮೇಲೆ ಬಿಜೆಪಿ ಸಂಸದ ಶಿವಕುಮಾರ್ ಉದಾಸಿ ದರ್ಪ ತೋರಿದ್ದಾರೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಂಸದರ ನಡೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೊಶ ವ್ಯಕ್ತವಾಗುತ್ತಿದೆ.

ಹೌದು… ನವೆಂಬರ್ 20ರಂದು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಸೋಮಸಾಗರ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಭೂಮಿ ಪೂಜೆಗೆ ಸಂಸದ ಶಿವಕುಮಾರ್ ಉದಾಸಿ ಆಗಮಿಸಿದ್ದರು. ಪೂಜೆ ಬಳಿಕ ಸಂಸದರ ಬಳಿ ಗ್ರಾಮದ ಶೇಕಪ್ಪ ಎಂಬವರು ತಮ್ಮ ಏರಿಯಾದ ಸಮಸ್ಯೆ ಹೇಳು ದಾಡಾಯಿಸಿದ್ದರು. ಸ್ಥಳೀಯ ಬಿಜೆಪಿ ಮುಖಂಡರೊಬ್ಬರ ಬಳಿ ಸಮಸ್ಯೆ ಹೇಳುತ್ತಿದ್ದಾಗ ಮಧ್ಯ ಪ್ರವೇಶಿಸಿ ಶಿವಕುಮಾರ್ ಉದಾಸಿ, ರಸ್ತೆ ಬಂದಾಗ ಬರ್ತಿಯಿಲ್ಲ ಎಂದರು.

ಇದಕ್ಕೆ ಪ್ರತಿಯಾಗಿ ಬಂದದ್ದು ಆಯ್ತು, ನೊಡ್ಕೊಂಡದ್ದು ಆಯ್ತು ಎಂದು ಶೇಖರಪ್ಪ ಪ್ರತ್ಯುತ್ತರ ನೀಡಿದರು. ಗ್ರಾಮಸ್ಥನ ತಿರುಗೇಟಿಗೆ ಕೋಪಗೊಂಡ ಸಂಸದರು ಆಯ್ತು ನೋಡ್ಕೊ ಹೋಗ್ ಎಂದು ಎಡಗೈಯಿಂದ ಗ್ರಾಮಸ್ಥನನ್ನ ನೂಕಿದರು. ಗ್ರಾಮಸ್ಥರನ್ನು ನೂಕಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights