3 ತಿಂಗಳಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚಿಸುತ್ತದೆ: ಸಚಿವ ರಾವ್‌ ಸಾಹೇಬ್‌ ದಾನ್ವೆ

ಮಹಾರಾಷ್ಟ್ರದಲ್ಲಿ ಮುಂದಿನ ಮೂರು ತಿಂಗಳಲ್ಲಿ ಬಿಜೆಪಿ ಸರಕಾರ ರಚನೆ ಆಗಲಿದೆ. ಅದಕ್ಕಾಗಿ ಎಲ್ಲಾ ಸಿದ್ದತೆಗಳು ನಡೆದಿವೆ. ವಿಧಾನ ಪರಿಷತ್‌ ಚುನಾವಣೆ ಮುಗಿಯುತ್ತಿದ್ದಂತೆ ಎಲ್ಲವೂ ಆರಂಭವಾಗಲಿದೆ ಎಂದು ಬಿಜೆಪಿ ಹಿರಿಯ ನಾಯಕ, ಕೇಂದ್ರ ಸಚಿವ ರಾವ್‌ ಸಾಹೇಬ್‌ ದಾನ್ವೆ ತಿಳಿಸಿದ್ದಾರೆ.

ಔರಂಗಬಾದ್‌ನಲ್ಲಿ ವಿಧಾನ ಪರಿಷತ್‌ ಚುನಾವಣೆ ಪ್ರಚಾರದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಇಲ್ಲ ಎಂದು ಚಿಂತಿಸುವ ಅಗತ್ಯವಿಲ್ಲ. ಇನ್ನು 2-3 ತಿಂಗಳಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಅವರು ಹೇಳಿದ್ದಾರೆ.

ಈಗ ಅಧಿಕಾರದಲ್ಲಿರುವ ಮಹಾ ವಿಕಾಸ ಅಘಾಡಿ ಎಂಬ ಹೆಸರಿನಲ್ಲಿ ಮೈತ್ರಿ ಸರ್ಕಾರ ಏನು ಮಾಡುತ್ತಿದೆ. ಯಾವ ರೀತಿಯ ಆಡಳಿತ ನಡೆಸಲಾಗುತ್ತಿದೆ ಎಂಬುದನ್ನು ಎಲ್ಲರೂ ನೋಡಿದ್ದಾರೆ. ಮುಂದಿನ ದಿನಗಳಲ್ಲಿ ರಾಜಕೀಯ ಲೆಕ್ಕಾಚಾರ ಬದಲಾಗಲಿದೆ. ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ರಾವ್‌ ಸಾಹೇಬ್‌ ದಾನ್ವೆ ಹೇಳಿದ್ದಾರೆ.

ಈ ಮಹಾ ವಿಕಾಸ ಅಘಾಡಿ ಸರಕಾರ ಒಳಜಗಳದಿಂದಾಗಿ ಪತನಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಆಂಧ್ರ ಜನರಿಂದ ಬಿಜೆಪಿ ಸಂಸದ ತೇಜಸ್ವಿಸೂರ್ಯ ಟ್ರೋಲ್‌!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights