ಭೀಕರ ‘ನಿವಾರ’ ಚಂಡಮಾರುತಕ್ಕೆ 5 ಜನ ಬಲಿ : ಧರೆಗುರುಳಿದ 80ಕ್ಕೂ ಹೆಚ್ಚು ಮರಗಳು..!

ಭೀಕರ ‘ನಿವಾರ’ ಚಂಡಮಾರುತ ಬುಧವಾರ ತಡರಾತ್ರಿ ಪುದುಚೇರಿ ಮತ್ತು ಕಡಲೂರು ಜಿಲ್ಲೆಯ ಕರಾವಳಿಯಲ್ಲಿ ಭಾರಿ ಮಳೆ ಹಾಗೂ ತೀವ್ರ ಗಾಳಿಯೊಂದಿಗೆ ಪ್ರವೇಶಿಸಲಾರಂಭಿಸಿದೆ. ಭಾರೀ ಮಳೆ ಗಾಳಿಯಿಂದಾಗಿ ಜನಜೀವನ ಅಸ್ಥವ್ಯಸ್ತಗೊಂಡಿದ್ದು, ಚೆನ್ನೈನಲ್ಲಿ 5 ಜನ ಸಾವನ್ನಪ್ಪಿದ್ದಾರೆ. 80ಕ್ಕೂ ಹೆಚ್ಚು ಮರಗಳು ಧರೆಗುಳಿರುಳಿದ್ದು ಸಂಚಾರ ಸಾಧ್ಯವಾಗದೇ ಜನ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಹವಮಾನ ಇಲಾಖೆ ಮುನ್ಸೂಚನೆ ಪ್ರಕಾರ ಬುಧವಾರ ರಾತ್ರಿ ನಿವಾರ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದು 120-130 ಕಿಮೀ ವೇಗದಲ್ಲಿ ಗಾಳಿ ಬೀಸುವ ಮೂಲಕ ತಮಿಳುನಾಡು ಮತ್ತು ಪುದುಚೇರಿಯನ್ನು ಕಾರೈಕಲ್ ಮತ್ತು ಮಾಮಲ್ಲಪುರಂ ನಡುವೆ ಹಾದುಹೋಗಲಿದ್ದು ಸದ್ಯ, ಕಡಲೂರಿನ ಪೂರ್ವ-ಆಗ್ನೇಯಕ್ಕೆ 50 ಕಿ.ಮೀ ಮತ್ತು ಪುದುಚೇರಿಯ ಪೂರ್ವ ಆಗ್ನೇಯಕ್ಕೆ ಸುಮಾರು 40 ಕಿ.ಮೀ.ದೂರದಲ್ಲಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆಗಳಿವೆ.

ಮುನ್ನೆಚ್ಚರಿಕೆ ಕ್ರಮವಾಗಿ ಯಾರೂ ಕೂಡ ಮೀನುಗಾರಿಕೆ, ಮೋಟರ್ ಬೋಟ್ಸ್ ಸೇರಿ ಇನ್ನಿತರ ಚಟುವಟಿಕೆಗಳಿಗಾಗಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ತಮಿಳುನಾಡಿನಲ್ಲಿ ಮಂಗಳವಾರದಿಂದಲೇ ಮಳೆಯಾಗುತ್ತಿದ್ದು, ಚಂಡಮಾರುತದ ಹಿನ್ನೆಲೆಯಲ್ಲಿ ಗುರುವಾರ ರಜೆ ಘೋಷಿಸಲಾಗಿದೆ.

ಜೊತೆಗೆ ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ 1200 ಸಿಬ್ಬಂದಿ ಚಂಡಮಾರುತದ ಸವಾಲುಗಳನ್ನು ಎದುರಿಸಲು ಸಜ್ಜಾಗಿದ್ದಾರೆ. ಇತರೆ 800 ಹೆಚ್ಚುವರಿ ಮಂದಿ ಸನ್ನದ್ಧ ಸ್ಥಿತಿಯಲ್ಲಿದ್ದಾರೆ. ಮತ್ತೊಂದೆಡೆ ಆಂಧ್ರಪ್ರದೇಶದ ಮೇಲೆ ಗತಿ ಚಂಡಮಾರುತ ಕೂಡ ದಾಳಿ ನಡೆಸುತ್ತಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights