ನಿವಾರ ಚಂಡಮಾರುತ ಎಫೆಕ್ಟ್ : ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದೊಂದಿಗೆ ತುಂತುರು ಮಳೆ..!

ನಿವಾರ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದು ಕರ್ನಾಟಕದಲ್ಲೂ ಇದರ ಪರಿಣಾಮ ಬೀರಿದೆ. ನಿನ್ನೆ ತಡರಾತ್ರಿಯಿಂದಲೂ ರಾಜ್ಯದ ಕರಾವಳಿ ಸೇರಿದಂತೆ ಹಲವಾರು ಭಾಗಗಳಲ್ಲಿ ಮೋಡಕವಿತ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ.

ತಮಿಳುನಾಡಿನ ಗಡಿಯಲ್ಲಿರುವ ಬೆಂಗಳೂರಿನಲ್ಲಿ ನಿವಾರ ಚಂಡಮಾರುತದ ಪರಿಣಾಮ ಬೀರಿದ್ದು ಅಲ್ಲಲ್ಲಿ ತುಂತುರು ಮಳೆಯಾಗಿದೆ. ಇದರ ಪರಿಣಾಮ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಬೆಂಗಳೂರಿನ ಮೆಜೆಸ್ಟಿಕ್, ಗಾಂಧಿನಗರ, ಮಲ್ಲೇಶ್ವರಂ, ಜಯನಗರ ಸೇರಿದಂತೆ ಹಲವೆಡೆ ನಿನ್ನೆ ರಾತ್ರಿಯಿಂದ ಮಳೆ ಸುರಿದಿದೆ.

ಇಂದು ಬೆಂಗಳೂರು ನಗರ, ಗ್ರಾಮಾಂತರ ಪ್ರದೇಶದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಬೆಂಗಳೂರು ಹೊರವಲಯದಲ್ಲಿ ನಿವಾರ್ ಚಂಡಮಾರುತದ ಪರಿಣಾಮದಿಂದ ಅಲ್ಲಲ್ಲಿ ಮಳೆಯಾಗಿದೆ. ಹೊರವಲಯದ ದಾಸರಹಳ್ಳಿ, ಮಲ್ಲಸಂದ್ರ, ಬಾಗಲಗುಂಟೆ ಸುತ್ತಮುತ್ತ ತುಂತುರು ಮಳೆಯಾಗಿದ್ದು ಸಂಜೆ ವೇಳೆಗೆ ಅಧಿಕ ಮಳೆಯಾಗುವ ಸಾಧ್ಯತೆ ಇದೆ.

ಮಾತ್ರವಲ್ಲದೇ ಕರಾವಳಿ ಸೇರಿದಂತೆ ಬೆಂಗಳೂರು‌ ನಗರ,‌ ಗ್ರಾಮಾಂತರ, ಕೋಲಾರ‌, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ಚಾಮರಾಜನಗರ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ನಿನ್ನೆ ರಾತ್ರಿ ತುಂತುರು ಮಳೆಯಾಗಿದ್ದು, ಇಂದು ಭಾರೀ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ನಿವಾರ್ ಚಂಡಮಾರುತದ ಪರಿಣಾಮದಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇಂದು ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ.

ನಿನ್ನೆ ರಾತ್ರಿ 2 ಗಂಟೆಗೆ ಪುದುಚೆರಿ ಬಳಿ ಅಪ್ಪಳಿಸಿರುವ ನಿವಾರ್ ಸೈಕ್ಲೋನ್​ನಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿದೆ. 25 ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್​ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಎನ್​ಡಿಆರ್​ಎಫ್​ ತಂಡಗಳನ್ನು ತಮಿಳುನಾಡು, ಪುದುಚೆರಿಗೆ ಕಳುಹಿಸಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights