ಸಚಿವ ಸ್ಥಾನಕ್ಕಾಗಿ ಲಾಬಿ : ಕೂಡಿಬರುತ್ತಾ ಸಿ.ಪಿ ಯೋಗೇಶ್ವರ್ ಗೆ ಯೋಗ..?

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಾವು ಜೋರಾಗಿದೆ. ಸಚಿವಾಕಾಂಕ್ಷಿಗಳು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿದ್ದಾರೆ. ಇನ್ನೆರಡು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು ವಿವಿಧ ಮುಖಂಡರಿಂದ ಸಚಿವಾಕಾಂಕ್ಷಿಗಳು ಒತ್ತಡ ಹೇರಲು ಆರಂಭಿಸಿದ್ದಾರೆ. ಮಾತ್ರವಲ್ಲದೇ ಕೇಂದ್ರದ ನಾಯಕರೊಂದಿಗೂ ಮಾತುಕತೆ ನಡೆಸಿದ್ದಾರೆ. ಇದರ ನಡುವೆ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಬೇಕು ಮತ್ತು ಬೇಡ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಬಿಜೆಪಿಯಲ್ಲಿ ಒಂದು ಗುಂಪು ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಲು ವಿರೋಧಿಸಿದರೆ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಯೇಗೇಶ್ವರ್ ಗೆ ಸಚಿವ ಸ್ಥಾನ ನೀಡುವುದಕ್ಕಾಗಿ ಪ್ರತ್ನಿಸುತ್ತಿದ್ದಾರೆ. ಇದಕ್ಕಾಗಿ ಪ್ರತ್ಯೇಕ ಸಭೆಗಳು ಕೂಡ ನಡೆಯುತ್ತಿವೆ. ಸಿ.ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಲು ನಿರಾಕರಿಸಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಆಪರೇಶನ್ ಕಮಲದ ಮೂಲಕ ಬಿಜೆಪಿ ಸೇರಿದ 17 ಶಾಸಕರು ಬಿಜೆಪಿ ಸರ್ಕಾರ ರಚನೆಗೆ ಕಾರಣರಾದರು ಎನ್ನುವ ಹೇಳಿಕೆಯನ್ನು ಜಾರಕಿಹೊಳಿ ನೀಡುತ್ತಿದ್ದಾರೆ. ಹೀಗಾಗಿ ಆಪ್ತ ಗೆಳೆಯನ ಮಂತ್ರಿ ಸ್ಥಾನಕ್ಕಾಗಿ ರಮೇಶ ಕೇಂದ್ರ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ.

ಆದರೆ ಯೋಗೇಶ್ವರ್ ಗೆ ಮಂತ್ರಿ ಸ್ಥಾನ ನಿರಾಕರಿಸಿದ ರೇಣುಕಾಚಾರ್ಯ ನೇತೃತ್ವದಲ್ಲಿ ಸಭೆ ಕೂಡ ನಡೆದಿದೆ. 17 ಶಾಸಕರು ಬಿಜೆಪಿ ಸೇರುವುದಕ್ಕೆ ಯೋಗೇಶ್ವರ್ ಕೊಡುಗೆ ಏನು ಇಲ್ಲ.’ ಮೊದಲು ಮೂಲ 105 ಬಿಜೆಪಿ ಶಾಸಕರು ಆಮೇಲೆ ವಲಸಿಗರು’ ಎನ್ನುವ ಮಾತನನ್ನ ಹೇಳಿದ್ದಾರೆ. ಇವರಿಬ್ಬರ ಕಾದಾಟದಲ್ಲಿ ಸಚಿವ ಸ್ಥಾನ ಯಾರಿಗೆ ಎನ್ನುವ ಕುತೂಹಲ ಮೂಡಿದೆ. ಮಾತ್ರವಲ್ಲದೇ ಬಿಜೆಪಿ ಆಂತರಿಕ ವಲಯದಲ್ಲಿ ಅಸಮಧಾನದ ಹೊಗೆ ಕೂಡ ಆಡುತ್ತಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights