ರಾಜ್ಯದಲ್ಲಿ 31ನೇ ಜಿಲ್ಲೆಯಾಗಿ ವಿಜಯನಗರ ಹೆಸರು ಘೋಷಿಸಿದ ಸಚಿವ ಮಾಧುಸ್ವಾಮಿ!

ಬಳ್ಳಾರಿ ಜೆಲ್ಲೆಯನ್ನು ವಿಭಜಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಗ್ರೀನ್ ಸಿಗ್ನಲ್ ಕೊಟ್ಟಿದೆ. ಈ ಮೂಲಕ ವಿಜಯನಗರ 31ನೇ ಜಿಲ್ಲೆ ಎಂದು ಸಚಿವ ಮಾಧುಸ್ವಾಮಿ ಅವರು ಘೋಷಣೆ ಮಾಡಿದರು.

ಸಚಿವ ಆನಂದ್ ಸಿಂಗ್ ಅವರ ಬಹುಕಾಲದ ಬೇಡಿಕೆ ಕೊನೆಗೂ ಈಡೇರಿದೆ. ಆನಂದ್ ಸಿಂಗ್ ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರವಾದ ಬಳಿಕ 2019ರ ಸಪ್ಟೆಂಬರ್ ನಲ್ಲೇ ವಿಜಯನಗರ ನೂತನ ಜಿಲ್ಲೆಯ ಬಗ್ಗೆ ಸಿಎಂ ಬಿಎಸ್ ವೈ ಘೋಷಣೆ ಮಾಡಿದ್ದರು. ಆದರೆ ಅದು  ಅನುಷ್ಠಾನಕ್ಕೆ ಬಂದಿರಲಿಲ್ಲ. ಸದ್ಯ ವಿಜಯನಗರ ಕರ್ನಾಟಕದ 31ನೇ ಜಿಲ್ಲೆಯಾಗಿ ರಚನೆಯಾಗಿದೆ. ರೈತರಿಗೆ, ಬಡವರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಜನಸಾಮಾನ್ಯರೆಲ್ಲರಿಗೂ ತಮ್ಮ ಕೆಲಸ ಕಾರ್ಯಗಳಿಗೆ ಜಿಲ್ಲಾ ಕೇಂದ್ರ ತಲುಪುವುದು ಸದ್ಯದ ಪರಿಸ್ಥಿತಿಯಲ್ಲಿ ಕಷ್ಟಕರವಾಗಿತ್ತು. ಹೀಗಾಗಿ ಈ ಹಿಂದೆ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆ ರಚನೆ ಬಗ್ಗೆ ಚರ್ಚಿಸಲಾಗಿತ್ತು. ಈ ಬಗ್ಗೆ ಒಮ್ಮತದ ನಿರ್ಣಯ ಕೈಗೊಳ್ಲಲಾಗಿದ್ದು ಇದೀಗ ವಿಜಯನಗರ ನೂತನ ಜಿಲ್ಲೆ ಎಂದು ಅಧಿಕೃತಗೊಳಿಸಲಾಗಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು.

ವಿಜಯನಗರ ಜಿಲ್ಲೆಗೆ ಹೊಸಪೇಟೆ ಜಿಲ್ಲಾಕೇಂದ್ರವಾಗಿರಲಿದ್ದು, ಬಳ್ಲಾರಿ ಜಿಲ್ಲೆಯಲ್ಲಿದ್ದ ಹೊಸಪೇಟೆ, ಹರಪನಹಳ್ಳಿ, ಹೂವಿನ ಹಡಗಲಿ, ಹಗರಿ ಬೊಮ್ಮನಹಳ್ಳಿ, ಕೊಟ್ಟೂರು, ಕೂಡ್ಲಿಗಿ ತಾಲೂಕುಗಳನ್ನು ವಿಜಯನಗರ ಜಿಲ್ಲೆಗೆ ಸೇರ್ಪಡೆ ಮಾಡಲಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ 11 ತಾಲೂಕುಗಳು ಮತ್ತು ಮೂರು ಕಂದಾಯ ಉಪವಿಭಾಗಳಿದ್ದವು. ಸದ್ಯ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆಯನ್ನು ರಚಿಸಿರುವ ಕಾರಣ ಆರು ತಾಲೂಕುಗಳು ಹೊಸ ಜಿಲ್ಲೆಗೆ ಸೇರ್ಪಡೆಯಾಗಿದೆ. ಹೀಗಾಗಿ ಬಳ್ಳಾರಿ ಜಿಲ್ಲೆಗೆ ಸದ್ಯ ಐದು ತಾಲೂಕುಗಳು  ಉಳಿದಿವೆ. ಬಳ್ಳಾರಿ, ಸಿರಗುಪ್ಪ, ಸಂಡೂರು, ಕಂಪ್ಲಿ ಮತ್ತು ಕುರಗೋಡು ತಾಲೂಕುಗಳು ಬಳ್ಳಾರಿ ಜಿಲ್ಲೆಯ ಭಾಗವಾಗಿ ಮುಂದುವರಿಯಲಿದೆ.
ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights