ಕೋಮು ಗಲಬೆ ಹರಡಲು ಇದು ಗುಜರಾತ್‌ ಅಲ್ಲ; ಇಲ್ಲಿ ಅವಕಾಶವೂ ಇಲ್ಲ: ಮಮತಾ ಬ್ಯಾನರ್ಜಿ

ಬಿಜೆಪಿಯವರು ಕೋಮು ಗಲಭೆ ಹರಡಲು ಇದು ಗುಜರಾತ್‌ ಅಲ್ಲ ಪಶ್ಚಿಮ ಬಂಗಾಳ. ಇಲ್ಲಿ ಕೋಮು ಗಲಬೆಗೆ ಜಾಗವೂ ಇಲ್ಲ, ಅದಕ್ಕೆ ಅವಕಾಶವನ್ನೂ ನಾವು ಕೊಡುವುದಿಲ್ಲ ಎಂದು ಪ. ಬಂಗಾಳ ಸಿಎಂ ಮಮತಾ ಬ್ಯಾರ್ಜಿ ಹೇಳಿದ್ದಾರೆ.

“ಬಂಗಾಳವನ್ನು ಗಲಭೆ ಪೀಡಿತ ಗುಜರಾತ್ ಆಗಿ ಪರಿವರ್ತಿಸಲು ನಾವು ಎಂದಿಗೂ ಅನುಮತಿಸುವುದಿಲ್ಲ. ಕೋಮು ಗಲಭೆಗಳನ್ನು ಹರಡಲು ಇದು ಗುಜರಾತ್​ ಅಲ್ಲ. ಅಲ್ಲದೆ, ಬಿಜೆಪಿ ಹೊರಗಿನವರ ಪಕ್ಷವಾಗಿದ್ದು, ಅದಕ್ಕೆ ರಾಜ್ಯದಲ್ಲಿ ಸ್ಥಾನವಿಲ್ಲ. ಚುನಾವಣೆಯ ಸಮಯದಲ್ಲಿ ಮಾತ್ರ ರಾಜ್ಯಕ್ಕೆ ಬಂದು ರಾಜ್ಯದ ಶಾಂತಿಯನ್ನು ಭಂಗಗೊಳಿಸಲು ಪ್ರಯತ್ನಿಸುವವರಿಗೆ ರಾಜ್ಯದಲ್ಲಿ ಜಾಗವಿಲ್ಲ” ಎಂದು ಕಿಡಿಕಾರಿದ್ದಾರೆ.

“ದೇಶದ ಗಡಿಯಲ್ಲಿ ಪರಿಸ್ಥಿತಿ ಉತ್ತಮವಾಗಿಲ್ಲ. ಆದರೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚುನಾವಣೆಯಲ್ಲಿ ಏಕೆ ನಿರತರಾಗಿದ್ದಾರೆ. ದೇಶದ ಗಡಿ ಸಮಸ್ಯೆಗಿಂತಲೂ ಅವರಿಗೆ ಚುನಾವಣೆಯೇ ಮುಖ್ಯವಾಗಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಪ. ಬಂಗಾಳದಲ್ಲಿ ವೈರಿ ಯಾರು? BJPಯೋ-TMCಯೋ? ಗೊಂದಲದಲ್ಲಿ ಎಡರಂಗ!

“ಬಿಜೆಪಿ ಇತ್ತೀಚೆಗೆ ಪಶ್ಚಿಮ ಬಂಗಾಳ ಚುನಾವಣೆ ಹಿನ್ನೆಲೆ, ರಾಜ್ಯವನ್ನು ಐದು ಸಾಂಸ್ಥಿಕ ವಲಯಗಳಾಗಿ ವಿಂಗಡಿಸಿ ಕೇಂದ್ರ ನಾಯಕರಿಗೆ ವಲಯಗಳ ಉಸ್ತುವಾರಿ ವಹಿಸಿದೆ. ಬಿಜೆಪಿ ಅವರು ಪಶ್ಚಿಮ ಬಂಗಾಳವನ್ನು ಗುಜರಾತ್ ಆಗಿ ಪರಿವರ್ತಿಸುವುದಾಗಿ ಹೇಳುತ್ತಿದ್ದಾರೆ. ನಮ್ಮ ಬಂಗಾಳವನ್ನು ಗುಜರಾತ್ ನಂತಹ ಗಲಭೆ ಪೀಡಿತ ಸ್ಥಳವನ್ನಾಗಿ ಮಾಡಲು ಅವರು ಏಕೆ ಬಯಸುತ್ತಾರೆ..? ನಮಗೆ ಗಲಭೆಗಳು ಬೇಡ ಶಂತಿ ಬೇಕು, ಅಭಿವೃದ್ಧಿ ಬೇಕು” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ 2021ಕ್ಕೆ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಏರಲೇಬೇಕು ಎಂದು ಬಿಜೆಪಿ ಸಾಕಷ್ಟು ಕಸರತ್ತು ನಡೆಸುತ್ತಿದೆ. ಪಕ್ಷವನ್ನು ಬೂತ್​ ಮಟ್ಟದಿಂದ ಬೆಳೆಸುವ ಸಲುವಾಗಿ ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಸಹ ಬಂಗಾಳದಲ್ಲಿ ರ್ಯಾಲಿಯನ್ನು ಆಯೋಜಿಸಿದ್ದರು. ಅಲ್ಲದೆ, ಈ ಮೂಲಕ ಹಿಂದೂಗಳ ಧೃವೀಕರಣಕ್ಕೆ ಮುಂದಾಗಿದ್ದಾರೆ.


ಇದನ್ನೂ ಓದಿ: ಪ. ಬಂಗಾಳ ಚುನಾವಣೆ: TMCಯಲ್ಲಿ ಭಿನ್ನಾಭಿಪ್ರಾಯ; BJP ಗೆಲುವಿಗೆ ವರದಾನ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights