ಸಿ.ಪಿ ನಾಗೇಶ್ವರ್ ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮಟ್ಟದಲ್ಲಿ ರಮೇಶ್ ಜಾರಕಿಹೊಳಿ ಲಾಬಿ..!

ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದ ಸಿಎಂ ಯಡಿಯೂರಪ್ಪಗೆ ಸಚಿವ ಸಂಪುಟ ವಿಸ್ತರಣೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಮೂಲ ಬಿಜೆಪಿಗರು ಹಾಗೂ ವಲಸೆ ಬಿಜೆಪಿಗರು ಮಂತ್ರಿ ಸ್ಥಾನಕ್ಕಾಗಿ ಕೇಂದ್ರ ಮಟ್ಟದಲ್ಲಿ ಲಾಬಿ ನಡೆಸಿದ್ದಾರೆ.

ಸಿಎಂ ಯಡಿಯೂರಪ್ಪ ಹೊಸ ಪಟ್ಟಿ ಸಿದ್ಧಪಡಿಸುವ ಮೊದಲು ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೂಲಕ ತಮ್ಮ ಬೇಡಿಕೆ ಈಡೇರಿಸಿಕೊಳ್ಳಲು ಮುಂದಾಗಿದ್ದಾರೆ. ಇತ್ತ ಸಚಿವ ರಮೆಶ್ ಜಾರಕಿಹೊಳಿ ತಮ್ಮ ಆಪ್ತ ಸ್ನೇಹಿತ ಸಿ.ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ಕೊಡಿಸಲು ಕಸರತ್ತು ನಡೆಸಿದ್ದಾರೆ. ದೆಹಲಿಯಲ್ಲಿರುವ ರಮೇಶ್​ ಜಾರಕಿಹೊಳಿ ಇಂದು ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿ, ಹೈಕಮಾಂಡ್ ಮೂಲಕ ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ಕೊಡಿಸಲು ಪ್ರಯತ್ನಿಸಲಿದ್ದಾರೆ. ಈ ಬಗ್ಗೆ ಮಾತನಾಡಿದ ಬಿಎಸ್ ವೈ ತಾವು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದು ಇನ್ನೆರಡು ದಿನಗಳಲ್ಲಿ ನೂತನ ಸಚಿವರ ಪಟ್ಟಿ ಬರಲಿದೆ ಎಂದಿದ್ದಾರೆ.

ಸಿ.ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುವ ಬಗ್ಗೆ ಸಾಕಷ್ಟು ಪರ ಹಾಗೂ ವಿರೋಧ ವ್ಯಕ್ತವಾಗಿದ್ದು ಈ ಬಗ್ಗೆ ಪ್ರತಿಕ್ರಿಯಿಸಿದ ಯೋಗೇಶ್, ನಾನು ಬಿ.ಎಕ್ ಸಂತೋಷ್ ಅವರನ್ನು ಭೇಟಿ ಮಾಡಿದ್ದೇನೆ. ಸಂತೋಷ ಜೊತೆ ರಾಜಕೀಯ ಚರ್ಚೆಯನ್ನೇನೂ ಮಾಡಿಲ್ಲ. ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಯಡಿಯೂರಪ್ಪ ನಿರ್ಧಾರ ತೆಗೆದುಕೊಳ್ಳೂತ್ತಾರೆ. ರಮೇಶ್ ಜಾರಕಿಹೊಳಿ ಜೊತೆಗೆ ನನಗೆ 20 ವರ್ಷದ ಗೆಳೆತನವಿದೆ. ಹೀಗಾಗಿ ರಮೇಶ್ ನನಗೆ ಸಚಿವ ಸ್ಥಾನ ಕೊಡಿಸಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ಸರ್ಕಾರ ಬರಲು ನನ್ನ ಪಾತ್ರವೇನು ಅದು ನಾಯಕರಿಗೆ ತಿಳಿದಿದೆ. ಅದನ್ನ ನಾನು ಮಾತನಾಡುವುದಿಲ್ಲ’ ಎಂದಿದ್ದಾರೆ.

ಸಚಿವ ಸಂಪುಟ ಪುನರ್ ರಚನೆ ವಿಚಾರವಾಗಿ ದೆಹಲಿಯಲ್ಲಿ ರಾಜಕೀಯ ಚಟುವಟಿಕೆ ಶುರುವಾಗಿದ್ದು, ರಾಜ್ಯ ಬಿಜೆಪಿ ನಾಯಕರು ಇಂದು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದಾರೆ. ಇಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿರುವ ಆರ್. ಅಶೋಕ್ ಬಳಿಕ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಲಿದ್ದಾರೆ. ರಮೇಶ್ ಜಾರಕಿಹೊಳಿ ಕೂಡ ಬಿಎಲ್​ ಸಂತೋಷ್ ಅವರನ್ನು ಭೇಟಿ ಮಾಡಲಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights