ದೇಶಾದ್ಯಂತ ಒಂದೇ ದಿನದಲ್ಲಿ 41,322 ಹೊಸ ಕೊರೊನಾ ಕೇಸ್ : 485 ಮಂದಿ ಬಲಿ!

ದೇಶಾದ್ಯಂತ ಒಂದೇ ದಿನದಲ್ಲಿ 41,322 ಹೊಸ ಕೊರೊನಾ ಕೇಸ್ ಪತ್ತೆಯಾಗಿದ್ದು, 485 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ಇನ್ನು ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 93,51,110ಕ್ಕೆ ಏರಿಕೆಯಾಗಿದ್ದು  ಸಾವಿನ ಸಂಖ್ಯೆ ಕೂಡ 1,36,200ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಈ ನಡುವೆ ಒಟ್ಟಾರೆ 93,51,110 ಮಂದಿ ಸೋಂಕಿತರ ಪೈಕಿ 41,452 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದರೊಂದಿಗೆ ಈ ವರೆಗೂ ಗುಣಮುಖರಾದವರ ಸಂಖ್ಯೆ 87,59,969 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 4,54,940 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights