ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಕಾರಣ ಬಿಚ್ಚಿಟ್ಟ ಡಿಕೆ ಶಿವಕುಮಾರ್..!

ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಕಾರಣ ಬಿಚ್ಚಿಟ್ಟ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ “ ಬಿಜೆಪಿಯೇ ಕಾರಣ” ಎಂದಿದ್ದಾರೆ. ‘ಸಂತೋಷ ಅವರ ಖಾಸಗಿ ವೀಡಿಯೋವೊಂದು ಎಂಎಲ್ ಸಿಗೆ ಮಿನಿಸ್ಟರ್ ಹಾಗೂ ದೆಹಲಿ ನಾಯಕರಿಗೆ ಕೊಟ್ಟಿದ್ದಾರೆ. ಹೀಗಾಗಿ ಅವರಿಗೆ ಬ್ಲಾಕ್ ಮೇಲ್ ಮಾಡಲಾಗಿತ್ತು. ಇದರಿಂದಾಗಿ ಅವರು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆಂದು ಕೆಲವರು ಹೇಳುತ್ತಿದ್ದಾರೆ’ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾತ್ರವಲ್ಲದೇ ಇದು ಉನ್ನತಮಟ್ಟದಲ್ಲಿ ತನಿಖೆ ನಡೆಯುವುದು ಸೂಕ್ತ ಎಂದು ಡಿಕೆಶಿ ಅಭಿಪ್ರಾಯಪಟ್ಟಿದ್ದಾರೆ.

ಇದಕ್ಕೆ ಪುಷ್ಠಿ ನೀಡುವಂತೆ ಸಂತೋಷ ಪತ್ನಿ ಕೂಡ ರಾಜಕೀಯ ಒತ್ತಡದಿಂದಲೇ ಆತ್ಮಹತ್ಯೆಗೆ ಯತ್ನ ನಡೆದಿದೆ ಎಂದು ಪತ್ನಿ ಜಾಹ್ನವಿ ಆರೋಪಿಸಿದ್ದಾರೆ. ‘ಸಂತೋಷ ಆತ್ಮಹತ್ಯೆಯ ಬಗ್ಗೆ ಸಾಕಷ್ಟು ಊಹಾಪೋಹಗಳು ಇವೆ. ನಾನು ಇದರ ಬಗ್ಗೆ ಹೆಚ್ಚು ಪ್ರತಿಕ್ರಿಯೆ ಮಾಡುವುದಿಲ್ಲ. ಐಸಿಯುವಿಂದ ಸಂತೋಷ ಚೇತರಿಸಿಕೊಂಡಿದ್ದಾರೆ’ ಎಂದು ಬಿಜೆಪಿ ರಾಜ್ಯದ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಮುಖ್ಯಮಂತ್ರಿಗಳ ರಾಜಕೀಯ ಆಪ್ತಕಾರ್ಯದರ್ಶಿ ಎಂ ಆರ್ ಸಂತೋಷ್ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.  ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ನಿದ್ರೆ ಮಾತ್ರೆಗಳನ್ನು ಸೇವಿಸಿ ಅಸ್ವಸ್ಥಗೊಂಡಿದ್ದರು.ಅವರನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಂ ಆರ್ ಸಂತೋಷ್, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.ಈಗಾಗಲೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಭೇಟಿ ನೀಡಿ ಈಗಾಗಲೇ ಆಸ್ಪತ್ರೆಯ ವೈದ್ಯರಿಂದ ಆರೋಗ್ಯವನ್ನು ವಿಚಾರಿಸುತ್ತಿದ್ದು, ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights