ಆತ್ಮಹತ್ಯೆಗೆ ಯತ್ನಿಸಿದ ಸಂತೋಷ್ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲು!

ಶುಕ್ರವಾರ ನಿದ್ದೆ ಮಾತ್ರ ಸೇವಿಸಿ ಆತ್ಮಹತ್ಯೆಗೆ ಯತ್ನಸಿದ್ದ ಸಂತೋಷ್ ವಿರುದ್ಧ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ.

ಮುಖ್ಯಮಂತ್ರಿಗಳ ರಾಜಕೀಯ ಆಪ್ತಕಾರ್ಯದರ್ಶಿ ಎಂ ಆರ್ ಸಂತೋಷ್ ಮಾನಸಿಕ ಖಿನ್ನತೆಗೆ ಒಳಗಾಗಿ ನಿದ್ದೆ ಮಾತ್ರ ಸೇವಿಸಿ ನಿನ್ನೆ ಆತ್ಮಹತ್ಯೆಗೆ ಯತ್ನಸಿದ್ದರು. ತಕ್ಷಣವೇ ಕುಟುಂಬಸ್ಥರು ಅವರನ್ನು ನಗರದ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ತುರ್ತುನಿಗಾ ಘಟಕದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 309ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿಕೊಳ್ಳಳಾಗಿದೆ. ಎಂಎಸ್ ರಾಮಯ್ಯ ಆಸ್ಪತ್ರೆಯಿಂದ ಎಂಎಲ್ ಸಿ ರಿಪೋರ್ಟ್ ರವಾನೆ ಆಗಿದ್ದು, ಈ ವರದಿ ಸದಾಶಿವನಗರ ಪೊಲೀಸರ ಕೈಗೆ ಸಿಕ್ಕಿದೆ. ವರದಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಮಾತಾನಾಡಲು ಶಕ್ತನಲ್ಲ. ಐಸಿಯುನಲ್ಲಿ‌ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಉಲ್ಲೇಖಿಸಲಾಗಿದೆ. ಆಸ್ಪತ್ರೆಯ ಎಂಎಲ್ ಸಿ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲು ಖಾಕಿ ಚಿಂತನೆ ನಡೆಸುತ್ತಿದ್ದು, ಸಂತೋಷ್ ಚೇರಿಸಿಕೊಂಡ ಬಳಿಕ ವಿಚಾರಣೆಗೆ ಒಳಪಡಿಸಲಿದ್ದಾರೆ.

ಮೇ 28ರಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಹಾಸನ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಗೆ ಸ್ಪಂದಿಸಿದ್ದರು. ಇಷ್ಟೇ ಅಲ್ಲದೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರನ್ನ ಪ್ರತಿ ಕಾರ್ಯಕ್ರಮಗಳಲ್ಲಿಯೂ ವಿರೋಧಿಸುತ್ತ ಬಂದಿದ್ದ ಸಂತೋಷ, ಕೆ ಎನ್ ಶಿವಲಿಂಗೇಗೌಡರ ಲೋಪದೋಷಗಳನ್ನು ಎತ್ತಿ ಹಿಡಿಯುವ ಮೂಲಕ ಮಾತಿನ ಮೂಲಕವೇ ಹರಿಹಾಯ್ದಿದ್ದರು.

ಇದಲ್ಲದೆ ಅರಸೀಕೆರೆ ಕ್ಷೇತ್ರಕ್ಕೆ ಬಂದ ಬಳಿಕ ಸ್ವಪಕ್ಷೀಯರ ಜೊತೆ ಹೊಂದಾಣಿಕೆ ಇಲ್ಲದೆ ಬಿಜೆಪಿ ಪಕ್ಷದಲ್ಲಿ ಎರಡು ಬಣಗಳಾಗಿತ್ತು. ಸಂತೋಷ್ ವಿರೋಧಿ ಬಣ ವಾಗಿರುವ ಮತ್ತೊಂದು ಬಿಜೆಪಿ ತಂಡ ಸಂತೋಷ್ ಸಾಂಸಾರಿಕ ಜೀವನದ ವಿಚಾರವನ್ನ ಎಳೆದು ಅವರಿಗೆ ಹಿಂದೆಯೇ ಅಪಮಾನ ಮಾಡಿದರು.

ಇದಾದ ಬಳಿಕ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿತ್ತು. ಜೊತೆಗೆ ಇತ್ತೀಚಿನ ದಿನಗಳಲ್ಲಿ ಮುಖ್ಯಮಂತ್ರಿ ಜೊತೆಯು ಕೂಡ ಒಡನಾಟದಲ್ಲಿ ಬಿರುಕು ಬಿಟ್ಟಿತ್ತು ಎನ್ನಲಾಗಿತ್ತು. ಆದರೆ ಇಂದು ಪುಸ್ತಕ ಓದುವ ಸಲುವಾಗಿ ಎರಡನೇ ಮಹಡಿ ಗೆ ತೆರಳಿದ ಎನ್. ಆರ್ ಸಂತೋಷ ಮಾನಸಿಕ ಖಿನ್ನತೆಗೆ ಒಳಗಾಗಿ ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಸದ್ಯ ಅಸ್ವಸ್ಥಗೊಂಡಿರುವ ಸಂತೋಷ್ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights