ಕೊರೊನಾ ಬಿಕ್ಕಟ್ಟಿನ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಚುನಾವಣೆ!

ಕೊರೊನಾ ಬಿಕ್ಕಟ್ಟಿನ ನಂತರ ಅಮೇರಿಕಾದಲ್ಲಿ ಅಧ್ಯಕ್ಷೀಯ ಚುನಾವಣೆ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದೆ. ಡಿಡಿಸಿ(ಜಿಲ್ಲಾ ಅಭಿವೃದ್ಧಿ ಮಂಡಳಿ) ಮೊದಲ ಹಂತದ ಚುನಾವಣೆ ನಡೆಯಲಿದೆ. ಇಂದಿನಿಂದ (ನವೆಂಬರ್ 28) ಡಿ.19ರವರೆಗೆ ಒಟ್ಟು ಎಂಟು ಹಂತಗಳಲ್ಲಿ ಮತದಾನ ನಡೆಯಲಿದೆ. ಇವತ್ತು ಮೊದಲ ಹಂತದ ಮತದಾನ ಆಗುತ್ತಿದೆ.

ಜಮ್ಮು ಮತ್ತು ಕಾಶ್ಮೀರದ ಒಟ್ಟು 43 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಇದರಲ್ಲಿ 25 ಕ್ಷೇತ್ರಗಳು ಕಾಶ್ಮೀರ ಮತ್ತು 18 ಜಮ್ಮು ಪ್ರದೇಶದಲ್ಲಿವೆ. ಕಣದಲ್ಲಿರುವ 1427 ಅಭ್ಯರ್ಥಿಗಳ ಭವಿಷ್ಯವನ್ನು ಜಮ್ಮು ಮತ್ತು ಕಾಶ್ಮೀರದಾದ್ಯಂತ ಏಳು ಲಕ್ಷ ಮತದಾರರು ನಿರ್ಧರಿಸಲಿದ್ದಾರೆ. ಇವರ ಪೈಕಿ ಕಾಶ್ಮೀರ ವಿಭಾಗದಲ್ಲಿ 3.73 ಲಕ್ಷ ಹಾಗೂ ಜಮ್ಮು ವಿಭಾಗದಲ್ಲಿ 3.28 ಲಕ್ಷ ಮಂದಿ ಮತದಾರರಿದ್ದಾರೆ. ಒಟ್ಟು 2,146 ಮತಗಟ್ಟೆಗಳಿವೆ. ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮತದಾನ ನಡೆಯಲಿದೆ.

ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಡಿಡಿಸಿ ಚುನಾವಣೆಗೆ ಒಟ್ಟು 280 ಕ್ಷೇತ್ರಗಳಿವೆ. ಮೊದಲ ಹಂತದಲ್ಲಿ 43 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯುತ್ತಿದ್ದು 296 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇವರ ಪೈಕಿ 89 ಮಹಿಳಾ ಅಭ್ಯರ್ಥಿಗಳಿರುವುದು ವಿಶೇಷ.ಇನ್ನು, ಸರ್ಪಂಚ್ ಚುನಾವಣೆಯಲ್ಲಿ ಮೊದಲ ಹಂತದಲ್ಲಿ 94 ಕ್ಷೇತ್ರಗಳಲ್ಲಿ 279 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಹಾಗೆಯೇ, 368 ಪಂಚಾಯಿತಿ ಉಪಚುನಾವಣೆಗಳಳಲ್ಲಿ 852 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಮತಗಟ್ಟೆಗಳಲ್ಲಿ ಸಕಲ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲಾಗಿದೆ. ಜನರಿಗೆ ಮಾಸ್ಕ್ ಮತ್ತು ಸಾಮಾಜಿಕ ಅಂತರ ಪಾಲನೆಗೆ ಸೂಚಿಸಲಾಗಿದೆ. ಸ್ಯಾನಿಟೈಸರ್, ಪಿಪಿಇ ಕಿಟ್ ಇತ್ಯಾದಿಗಳನ್ನ ಪ್ರತಿ ಮತಗಟ್ಟೆಗೂ ಒದಗಿಸಲಾಗಿದೆ. ಡಿಸೆಂಬರ್ 19ರವರೆಗೆ ಈ ಚುನಾವಣೆ ನಡೆಯಲಿದ್ದು, ಡಿಸೆಂಬರ್ 22ರಂದು ಮತ ಎಣಿಕೆ ಆಗಿ ಫಲಿತಾಂಶ ಪ್ರಕಟವಾಗಲಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights