Bjp-RSS ಹೇಳುವ ಭಾರತದಲ್ಲಿ ದಲಿತರು-ಆದಿವಾಸಿಗಳಿಗೆ ಶಿಕ್ಷಣವಿಲ್ಲ: ರಾಹುಲ್‌ಗಾಂಧಿ

ಬಿಜೆಪಿ-ಆರ್‌ಎಸ್‌ಎಸ್‌ ಕನಸಿನ ಭಾರತದಲ್ಲಿ ಆದಿವಾಸಿಗಳು ಮತ್ತು ಪರಿಶಿಷ್ಟರಿಗೆ ಶಿಕ್ಷಣ ಸಿಗುವುದಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸರ್ಕಾರ ಅನುದಾನ ನೀಡುವುದು ಮುಕ್ತಾಯಗೊಂಡ ಕಾರಣ 60 ಲಕ್ಷ ಪರಿಶಿಷ್ಟ ವಿದ್ಯಾರ್ಥಿಗಳು ವಿದ್ಯಾರ್ಥಿವೇತನದಿಂದ ವಂಚಿತರಾಗಿದ್ದಾರೆ ಎಂಬ ಮಾಧ್ಯಮವೊಂದರ ವರದಿ ಹಿನ್ನೆಲೆಯಲ್ಲಿ ಅವರು ಟ್ವೀಟ್‌ ಮೂಲಕ ಈ ಟೀಕೆ ಮಾಡಿದ್ದಾರೆ. ತಮ್ಮ ಟ್ವಿಟರ್‌ ಖಾತೆಯಲ್ಲಿ ಮಾಧ್ಯಮ ವರದಿಯನ್ನು ಸಹ ಅವರು ಹಂಚಿಕೊಂಡಿದ್ದಾರೆ.

  • ’14ಕ್ಕೂ ಅಧಿಕ ರಾಜ್ಯಗಳಿಗೆ ನೀಡುತ್ತಿದ್ದ ಅನುದಾನವನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದೆ. ಇದರಿಂದ 11 ಮತ್ತು 12ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ 60 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗಿದೆ’ ಎಂದು ಮಾಧ್ಯಮವೊಂದರಲ್ಲಿ ಪ್ರಕಟಗೊಂಡ ವರದಿಯಲ್ಲಿ ವಿವರಿಸಲಾಗಿದೆ.
ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights