ಸಿಗರೇಟ್‌ ಹಚ್ಚಲು ಬೆಂಕಿಪೊಟ್ಟಣ ನೀಡದಿದ್ದಕ್ಕೆ ದಲಿತನ ಹತ್ಯೆ!

ದಲಿತರ ಮೇಲಿನ ದೌರ್ಜನ್ಯದ ದರಂತ ಘಟನೆಗೆ ಮಧ್ಯಪ್ರದೇಶ ಮೊತ್ತೊಮ್ಮೆ ಸಾಕ್ಷಿಯಾಗಿದೆ. ಮಧ್ಯಪ್ರದೇಶ ಗುಣಾದಲ್ಲಿ ಸಿಗರೇಟು ಹಚ್ಚಲು ಬೆಂಕಿಪೊಟ್ಟಣ ನೀಡಲು ನಿರಾಕರಿಸಿದ್ದಕ್ಕಾಗಿ 50 ವರ್ಷದ ದಲಿತ ವ್ಯಕ್ತಿಯನ್ನು ಇಬ್ಬರು ವ್ಯಕ್ತಿಗಳು ಅಮಾನುಷವಾಗಿ ಥಳಿಸಿದ್ದು, ಆತ ಸಾವನ್ನಪ್ಪಿದ್ದಾನೆ ಎಂದು ಎನ್‌ಡಿ ಟಿವಿ ವರದಿ ಮಾಡಿದೆ.

ಸಾವನ್ನಪ್ಪಿದ ಲಾಲ್ಜಿ ರಾಮ್‌ ಅಹಿರ್ವಾರ್‌ ಅವರು ಗದ್ದೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಆರೋಪಿಗಳಾದ ಯಶ್ ಯಾದವ್ ಮತ್ತು ಅಂಕೇಶ್ ಯಾದವ್ ಎಂಬುವವರು ಆತನ ಮೇಲೆ ಕೂಲುಗಳಿಂದ ಥಳಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಲಾಲ್ಜಿ ರಾಮ್‌ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಗುಣಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಚೇತರಿಸಿಕೊಳ್ಳಲಾಗದೆ ಸಾವನ್ನಪ್ಪಿದರು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ಎಸ್.ಬಘೇಲ್‌ ತಿಳಿಸಿದ್ದಾರೆ.

ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತರ ಕುಟುಂಬಕ್ಕೆ 8.25 ಲಕ್ಷ ರೂ.ಗಳ ಆರ್ಥಿಕ ಸಹಾಯವನ್ನು ರಾಜ್ಯ ಸರ್ಕಾರ ಘೋಷಿಸಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.


ಇದನ್ನೂ ಓದಿ: ದೂರು ಹಿಂಡೆಯುವಂತೆ ಒತ್ತಾಯ: ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಮೇಲ್ಜಾತಿ ಪುಂಡರು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights