ಗ್ರಾಮ ಪಂಚಾಯತಿ ಚುನಾವಣಾ ದಿನಾಂಕ ಪ್ರಕಟ: ಇಂದಿನಿಂದಲೇ ನೀತಿಸಂಹಿತೆ ಜಾರಿ!

ಕೊರೊನಾ ಕಾರಣದಿಂದಾಗಿ ನಿಗದಿಯಾಗದೇ ಮುಂದೂಡತ್ತಲೇ ಇದ್ದ ಗ್ರಾಮ ಪಂಚಾಯತಿ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಇಂದು ಚುನಾವಣಾ ಆಯೋಗವು ಚುನಾವಣಾ ದಿನಾಂಕವನ್ನು ಪ್ರಕಟಿಸಿದ್ದು, ಡಿಸೆಂಬರ್ 22 ಮತ್ತು 27 ರಂದು ಎರಡು ಹಂತದ ಚುನಾವಣೆ ನಡೆಯಲಿದೆ. ಡಿಸೆಂಬರ್ 30 ರಂದು ಫಲಿತಾಂಶ ಘೋಷಣೆಯಾಗಲಿದೆ.

“ರಾಜ್ಯದ ಪ್ರತಿ ಜಿಲ್ಲೆಗಳಲ್ಲಿಯೂ ಎರಡೂ ಹಂತದಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 22 ರಂದು ರಾಜ್ಯದ 113 ತಾಲ್ಲೂಕುಗಳ 2,930 ಗ್ರಾ.ಪಂ ಗಳಿಗೆ ಚುನಾವಣೆ ನಡೆಯಲಿದೆ. ಅದೇ ರೀತಯಲ್ಲಿ ಡಿಸೆಂಬರ್ 27 ರಂದು 113 ತಾಲ್ಲೂಕುಗಳ 2,832 ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ನಡೆಸಲಾಗುವುದು. ಡಿಸೆಂಬರ್ 30 ರಂದು ಮತ ಎಣಿಕೆ ನಡೆಯಲಿದೆ. ಇಂದಿನಿಂದಲೇ ನೀತಿ ಸಂಹಿತಿ ಜಾರಿಯಾಗಲಿದೆ” ರಾಜ್ಯ ಚುನಾವಣಾ ಆಯುಕ್ತ ಬಸವರಾಜ್ ತಿಳಿಸಿದ್ದಾರೆ.

ರಾಜ್ಯದ 5,762 ಗ್ರಾಮಪಂಚಾಯ್ತಿಗಳಿಗೆ ಚುನಾವಣೆ ನಡೆಯಲಿದ್ದು, ಇದಕ್ಕಾಗಿ ಅಂದಾಜು 5847 ಚುನಾವಣಾಧಿಕಾರಿಗಳನ್ನು ಮತ್ತು 6085 ಸಹಾಯಕ ಚುನವಣಾಧಿಕಾರಿಗಳನ್ನು ನೇಮಕ ಮಾಡಲಾಗುವುದು. ಕೋವಿಡ್ ಹಿನ್ನೆಲೆಯಲ್ಲಿ 45,000 ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರ ಸಹಾಯ ಪಡೆದುಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಗ್ರಾಮ ಪಂಚಾಯತಿ ಚುನಾವಣಗೆ ಬಿಜೆಪಿ ತಂತ್ರ: ಸಫಲವಾಗುತ್ತಾ 6:6 ಸ್ಟ್ಯಾಟಜಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights