ಸಿ.ಪಿ ಯೋಗೇಶ್ವರ್ ಗೆ ನೂರಕ್ಕೆ ನೂರು ಮಂತ್ರಿ ಸ್ಥಾನ ಫಿಕ್ಸ್ – ಸಿಎಂ ಯಡಿಯೂರಪ್ಪ ಸ್ಪಷ್ಟ ಹೇಳಿಕೆ

ವಿಧಾನಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ಸಿಗಲು ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆದಿದ್ದ ಸಚಿವ ರಮೇಶ್ ಜಾರಕಿಹೊಳಿ ಸಕ್ಸಸ್ ಆಗಿದ್ದಾರೆ. ಯಾಕೆಂದ್ರೆ ಇಂದು ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಸಿಪಿ ಯೋಗೇಶ್ವರ್ ಗೆ ನೂರಕ್ಕೆ ನೂರು ಸಚಿವ ಸ್ಥಾನ ಕೊಡುತ್ತೇವೆ ಎಂದು ಹೇಳಿದ್ದಾರೆ. ಸಿಪಿ ಯೋಗೇಶ್ವರ್ ಗೆ ಸಚಿವ ಸ್ಥಾನದ ಬಗ್ಗೆ ಪರ ಮತ್ತು ವಿರೋಧಗಳು ಮೂಲ ಮತ್ತು ವಲಸೆ ಬಿಜೆಪಿಗರಲ್ಲಿ ವ್ಯಕ್ತವಾಗಿತ್ತು. ಹೀಗಾಗಿ ಬಿಜೆಪಿಯಲ್ಲಿ ಕೊಂಚ ಅಸಮಧಾನದ ಹೊಗೆ ಆಡುತ್ತಿರುವಾಗಲೇ ಸಿಎಂ ಯಡಿಯೂರಪ್ಪ ಸಿಪಿ ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ಕೊಟ್ಟೇ ಕೊಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಯಾರಿಗೆ ಸಚಿವ ಸ್ಥಾನ ಕೊಡಬೇಕು ಎಂದು ಹೈಕಮಾಂಡ್ ನಿರ್ಧಾರ ಮಾಡಬೇಕು. ಆದ್ರೆ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ಕೊಡುವುದಾಗಿ ಆತ್ಮವಿಶ್ವಾಸದಲ್ಲಿ ಬಿಎಸ್ ವೈ ಹೇಳಿಕೆಯನ್ನು ಕೊಟ್ಟಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿಪಿ ಯೋಗೇಶ್ವರ್ ಸೋತರೂ ಸಚಿವ ಸ್ಥಾನ ಲಬಿಸಿದ್ದು ಮೂಲ ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದೆ.

1 ವಾರ ದೆಹಲಿಯಲ್ಲಿ ಬೀಡುಬಿಟ್ಟಿದ್ದ ರಮೇಶ್ ಜಾರಕಿಹೊಳಿ ಯೋಗೇಶ್ವರ್ ಗೆ ಸಚಿವ ಸ್ಥಾನ ಕೊಡಲು ಸಾಧ್ಯವಿಲ್ಲ ಎಂದರೆ ತಾವು ಯಾವ ತ್ಯಾಗಕ್ಕೂ ಸಿದ್ದ ಎಂದಿದ್ದರು ರಮೇಶ್ ಜಾರಕಿಹೊಳಿ. ಸದ್ಯ ಈ ಲಾಬಿ ಸಕ್ಸಸ್ ಆಗಿದೆ. ಸಚಿವ ರಮೇಶ್ ಜಾರಕಿಹೊಳಿ ತನ್ನ ಸ್ನೇಹಿತ ಸಿಪಿ ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಹೈಕಮಾಂಡ್ ಮಟ್ಟದಲ್ಲಿ ದೊಡ್ಡ ಲಾಬಿ ನಡೆಸಿದ್ದರು. ಸದ್ಯ ಹೈಕಮಾಂಡ್ ಬಳಿ ‘ಸಾಹುಕಾರನ’ ಲಾಬಿ ವರ್ಕೌಟ್ ಆಗಿದೆ. ಪಕ್ಷದ ನಾಯಕರ ವಿರೋಧದ ಮಧ್ಯೆ ಸಿಎಂ ಯಡಿಯೂರಪ್ಪ ಈ ಹೇಳಿಕೆ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಇದನ್ನು ಹೇಗೆ ನಿಭಾಯಿಸುತ್ತಾರೆ ಸಿಎಂ ಎನ್ನುವುದನ್ನ ಕಾದು ನೋಡಬೇಕಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights