ಡ್ರಗ್ಸ್ ಮಾಫಿಯಾ : ಸಂಜನಾ ಗಲ್ರಾನಿ ಆರೋಗ್ಯ ಸ್ಥಿತಿಗತಿ ಬಗ್ಗೆ ವರದಿ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ..!

ಮಾದಕ ಲೋಕದ ಜಾಲದಲ್ಲಿ ನಂಟು ಹೊಂದಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ನ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಆರೋಗ್ಯ ಸ್ಥಿತಿಗತಿ ಕುರಿತು ವರದಿ ಸಲ್ಲಿಸುವಂತೆ ಸಿಸಿಬಿ ಪೊಲೀಸರಿಗೆ ಹೈಕೋರ್ಟ್ ಸೂಚಿಸಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾದಲ್ಲಿ ಸಂಜನಾ ಹಾಗೂ ತುಪ್ಪದ ಹುಡುಗಿ ರಾಗಿಣಿ ಜೈಲುವಾಸ ಅನುಭವಿಸುತ್ತಿದ್ದಾರೆ. ಮಾತ್ರವಲ್ಲದೇ ನಾನಾ ಕಾರಣಗಳನ್ನು ಒಡ್ಡಿ ಜಾಮೀನು ಅರ್ಜಿ ಸಲ್ಲಿಸುತ್ತಲೇ ಇದ್ದಾರೆ. ಆದರೆ ಅದ್ಯಾಕೋ ಎಷ್ಟೇ ಪ್ರಯತ್ನ ಪಟ್ಟರೂ ಇಬ್ಬರು ನಟಿಯರಿಗೆ ಬಿಡುಗಡೆ ಭಾಗ್ಯ ಕೂಡಿ ಬರುತ್ತಲೇ ಇಲ್ಲ. ಪ್ರಕರಣದಲ್ಲಿ 2ನೇ ಬಾರಿ ಜಾಮೀನು ಕೋರಿ ಸಂಜನಾ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರು ಈ ಸೂಚನೆ ನೀಡಿ ವಿಚಾರಣೆಯನ್ನು ಡಿ.4ಕ್ಕೆ ಮುಂದೂಡಿದರು.

ಅರ್ಜಿದಾರರು ಅನಾರೋಗ್ಯದ ಕಾರಣ ನೀಡಿ ಜಾಮೀನು ಕೋರಿದ್ದಾರೆ.

ಹೀಗಾಗಿ, ಅವರ ಸದ್ಯದ ಆರೋಗ್ಯ ಸ್ಥಿತಿ ಕುರಿತು ಕಾರಾಗೃಹದ ಅಧಿಕಾರಿಗಳು ಹಾಗೂ ವೈದ್ಯರಿಂದ ಮಾಹಿತಿ ಪಡೆದು ಮುಂದಿನ ವಿಚಾರಣೆ ವೇಳೆ ವರದಿ ಸಲ್ಲಿಸಬೇಕು ಎಂದು ಸಿಸಿಬಿ ಪರ ವಿಶೇಷ ಅಭಿಯೋಜಕ ವೀರಣ್ಣ ತಿಗಡಿ ಅವರಿಗೆ ನ್ಯಾಯಮೂರ್ತಿಗಳು ಸೂಚಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights