ಸೂಟು-ಬೂಟು ಸರ್ಕಾರದಿಂದ ರೈತರ ಆದಾಯ ಅರ್ಧದಷ್ಟಾಗಿದೆ; ಸ್ನೇಹಿತರ ಆದಾಯ ದುಪ್ಪಟ್ಟಾಗಿದೆ: ರಾಹುಲ್‌ಗಾಂಧಿ

ಸೂಟು-ಬೂಟು ಸರ್ಕಾರದ ನೀತಿಗಳಿಂದಾಗಿ ರೈತರ ಬದುಕು ದುಸ್ತರವಾಗದೆ. ರೈತರ ಆದಾಯ ಅರ್ಧದಷ್ಟು ಇಳಿಕೆಯಾಗಿದೆ. ಆದರೆ ಸರ್ಕಾರದ ಸ್ನೇಹಿತರ ಆದಾಯ ಮಾತ್ರ ದುಪ್ಪಟ್ಟು ಹೆಚ್ಚುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ದ ರಾಹುಲ್‌ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ರೈತರ ಆದಾಯ ದ್ವಿಗುಣಗೊಳ್ಳಲಿದೆ ಎಂದು ಹೇಳಿದ್ದರು. ಆದರೆ ಸರ್ಕಾರದ ಸ್ನೇಹಿತರ ಆದಾಯ ದ್ವಿಗುಣಗೊಳ್ಳುತ್ತಿದೆ. ರೈತರ ಆದಾಯ ಅರ್ಧಕ್ಕೆ ಇಳಿದಿದೆ. ರೈತರ ಶ್ರಮವನ್ನು ಸೂಟು-ಬೂಟು ಸರ್ಕಾರ ಲೂಟಿ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಅವರ ಆದಾಯವನ್ನು ದ್ವಿಗುಣಗೊಳಿಸಲು ತಮ್ಮ ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ಧ್ವನಿಯನ್ನು ಪ್ರತಿಭಟನಾ ನಿರತ ರೈತರ ವಿರುದ್ಧ ದೌರ್ಜನ್ಯ ಮತ್ತು ಬಲಪ್ರಯೋಗ ನಡೆಸಿದ ವಿಡಿಯೋಗೆ ಜೋಡಿಸಿದ ವಿಡಿಯೋವನ್ನು ಟ್ವಿಟರ್‌ನಲ್ಲಿ ರಾಹುಲ್ ಗಾಂಧಿ ಹಂಚಿಕೊಂಡಿದ್ದರೆ.

ಕೇಂದ್ರ ಸರ್ಕಾರ ಕೃಷಿ ನೀತಿಗಳ ವಿರುದ್ಧ ನವೆಂಬರ್ 26ರಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಮತ್ತು ರೈತರ ನಡುವೆ ಮಾತುಕತೆ ಮುಗಿದು ಬಿದ್ದಿದ್ದು, ಡಿಸೆಂಬರ್ 03 ರಂದು ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಕೃಷಿ ನೀತಿಗಳನ್ನು ಸರ್ಕಾರ ಹಿಂಪಡೆಯದಿದ್ದರೆ ಜನವರಿ 26ರ ವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ರೈತರು ಹೇಳಿದ್ದಾರೆ.


ಇದನ್ನೂ ಓದಿ: ಜ.26ರವರೆಗೆ ರೈತರ ಪ್ರತಿಭಟನೆ : ‘ಅಗತ್ಯ ವಸ್ತುಗಳ ಪೂರೈಕೆ ನಿಲ್ಲುವುದಿಲ್ಲ’- ರಾಕೇಶ್ ಟಿಕೈಟ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights