ಮಹಾರಾಷ್ಟ್ರ MLC ಚುನಾವಣೆ: ಕಾಂಗ್ರೆಸ್‌-ಶಿವಸೇನಾ ಮೈತ್ರಿ ಮುನ್ನಡೆ; ಬಿಜೆಪಿಗೆ ಮುಖಭಂಗ

ಮಹಾರಾಷ್ಟ್ರದಲ್ಲಿ ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಶಿವಸೇನೆಯೊಂದಿಗೆ ಗುದ್ದಾಡಿ ಮುಖಭಂಗ ಅನುಭವಿಸಿದ್ದ ಬಿಜೆಪಿ, ಇದೀಗ ಮತ್ತೆ ಮುಖಭಂಗ ಅನುಭವಿಸಿದೆ.  ಮಹಾರಾಷ್ಟ್ರದ ವಿಧಾನಪರಿಷತ್ತಿನ ಶಿಕ್ಷಕ- ಪದವೀಧರ ಕ್ಷೇತ್ರದ 6 ಸ್ಥಾನಗಳಲ್ಲಿ ಆಡಳಿತರೂಢ ಮಹಾವಿಕಾಸ್ ಅಘಾಡಿ 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ ಬಿಜೆಪಿ ಕೇವಲ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಒಂದು ಸ್ಥಾನದಲ್ಲಿ ಸ್ವತಂತ್ರ ಅಭ್ಯರ್ಥಿ ಜಯಗಳಿಸಿದ್ದಾರೆ.

ಬಿಜೆಪಿಯು 4 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಶಿವಸೇನೆಯು ಒಂದು ಸ್ಥಾನದಲ್ಲಿ ಸ್ಪರ್ಧಿಸಿ ಹಿನ್ನಡೆ ಸಾಧಿಸಿದರೆ ಅದರ ಮಿತ್ರಪಕ್ಷಗಳಾದ ಕಾಂಗ್ರೆಸ್ ಮತ್ತು ಎನ್‌ಸಿಪಿ ತಲಾ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಎರಡರಲ್ಲಿಯೂ ಮುನ್ನಡೆ ಸಾಧಿಸಿವೆ.

ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಪ್ರಬಲ ಸ್ಥಳ ನಾಗ್ಪುರದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದೆ. ಅಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷಗಳು ಮುನ್ನಡೆ ಸಾಧಿಸಿವೆ.


ಇದನ್ನೂ ಓದಿ: ಶೇಮ್‌ ಆನ್ ಮೀಡಿಯಾ: ರೈತರು ಮಾಧ್ಯಮಗಳನ್ನು ತಿರಸ್ಕರಿಸುತ್ತಿರುವುದೇಕೆ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights