ಹೈದರಾಬಾದ್ ಪಾಲಿಕೆ ಚುನಾವಣೆ: BJP ವಿರುದ್ಧ 57 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೂ TRSಗೆ ನಿರಾಸೆ?

ಬೃಹತ್ ಹೈದರಾಬಾದ್ ಮಹಾನಗರ ಪಾಲಿಕೆ (GHMC) ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಎಣಿಕೆ ಆರಂಭದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿತ್ತಾದರೂ ಇದೀಗ ಕುಸಿಯುತ್ತಿದೆ. 150 ವಾರ್ಡ್‌ಗಳ ಪೈಕಿ 57 ಸ್ಥಾನಗಗಳಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌) ಮುನ್ನಡೆ ಸಾಧಿಸಿದ್ದು, ಬಿಜೆಪಿಯನ್ನು ಹಿಮ್ಮೆಟ್ಟಿದೆ. ಅಲ್ಲದೆ, ಅಸಾದುದ್ದಿನ್‌ ಓವೈಸಿ ಅವರ ಪಕ್ಷ ಎಐಎಂಐಎಂ ಕೂಡ 31 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಸಧ್ಯ ಬಿಜೆಪಿ 22 ಮತ್ತು ಕಾಂಗ್ರೆಸ್‌ 2 ಸ್ಥಾನಗಳಲ್ಲಿ ಮುನ್ನಡೆಯಲ್ಲಿವೆ.

ಕಳೆದ ಬಾರಿಯ ಪಾಲಿಕೆ ಚುನಾವಣೆಯಲ್ಲಿ ಕೇವಲ 4 ಸ್ಥಾನ ಗಳಿಸಿದ್ದ ಬಿಜೆಪಿ 20ಕ್ಕಿಂತ ಹೆಚ್ಚು ವಾರ್ಡ್​ಗಳಲ್ಲಿ ಮುನ್ನಡೆ ಹೊಂದಿದ್ದು, ಬಿಜೆಪಿ ಸ್ಥಳೀಯವಾಗಿ ಪ್ರಾಬಲ್ಯ ಸಾಧಿಸಿದೆ ಎಂದು ಹೇಳಲಾಗುತ್ತಿದೆ.

ಗ್ರೇಟರ್ ಹೈದರಾಬಾದ್ ಪ್ರದೇಶದ ವ್ಯಾಪ್ತಿಯಲ್ಲಿ 25 ವಿಧಾನಸಭಾ ಕ್ಷೇತ್ರಗಳು ಹಾಗೂ ನಾಲ್ಕು ಲೋಕಸಭಾ ಕ್ಷೇತ್ರಗಳಿವೆ. ಹೀಗಾಗಿ, ಪಾಲಿಕೆಯ ಗೆಲುವು ಮುಂದಿನ ವಿಧಾನಸಭಾ ಚುನಾವಣೆ ಅಡಿಗಲ್ಲಾಗಲಿದೆ ಎನ್ನಲಾಗುತ್ತಿದೆ. ಕಳೆದ ಚುನವಣೆಯಲ್ಲಿ 99 ಸ್ಥಾನಗಳನ್ನು ಗೆದ್ದಿದ್ದ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷ ಪಾಲಿಕೆ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿತ್ತು. ಆದರೆ, ಕಳೆದ ಚುನಾವಣೆಗಿಂತಲೂ ಕಡಿಮೆ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಫಲಿತಾಂಶ ಟಿಆರ್‌ಎಸ್‌ಗೆ ನಿರಾಸೆ ಉಂಟುಮಾಡುವ ಸಾಧ್ಯತೆ ಇದೆ.


ಇದನ್ನೂ ಓದಿ: ಮಹಾರಾಷ್ಟ್ರ MLC ಚುನಾವಣೆ: ಕಾಂಗ್ರೆಸ್‌-ಶಿವಸೇನಾ ಮೈತ್ರಿ ಮುನ್ನಡೆ; ಬಿಜೆಪಿಗೆ ಮುಖಭಂಗ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights