ಆಸ್ಟ್ರೇಲಿಯಾ vs ಭಾರತ: ಸಿಡ್ನಿಯಲ್ಲಿ ‘ಮಿಸ್ ಯು ಧೋನಿ’ ಪೋಸ್ಟರ್ ಬಗ್ಗೆ ಕೊಹ್ಲಿ ಪ್ರತಿಕ್ರಿಯೆ ವೈರಲ್!

ವಿಶ್ವಕಪ್ ವಿಜೇತ ಮಾಜಿ ಭಾರತ ನಾಯಕ ಎಂಎಸ್ ಧೋನಿ ಆಗಸ್ಟ್ 15 ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದರು. ಆದರೆ ಅವರ ಅಭಿಮಾನಿಗಳು ಮಾತ್ರವಲ್ಲ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ತಂಡದ ಆಟಗಾರರು ಎಂಎಸ್ ಧೋನಿಯನ್ನು ನೆನಪಿಸಿಕೊಳ್ಳುತ್ತಲೇ ಇರುತ್ತಾರೆ.

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯನ್ನು ಟೀಮ್ ಇಂಡಿಯಾ ಮೊದಲ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ವಶಕ್ಕೆ ಪಡೆದುಕೊಂಡಿದೆ. ಈ ಮೂಲಕ ಏಕದಿನ ಸರಣಿಯ ಸೋಲಿಗೆ ಸೇಡು ತೀರಿಸಿಕೊಂಡಿದೆ. ಈ ವೇಳೆ ಕೊಹ್ಲಿ ಧೋನಿಯನ್ನು ನೆನಪು ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಹಿಡಿದ ” ಮಿಸ್ ಯು ಧೋನಿ” ಬ್ಯಾನರ್ ಗೆ ” ಮಿ ಟೂ” ಎನ್ನುವ ಸಂದೇಶ ಕೊಟ್ಟಿದ್ದು ಸದ್ಯ ಭಾರೀ ವೈರಲ್ ಆಗಿದೆ.

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಭಾರತದ ಅಭಿಮಾನಿಗಳ ಬ್ಯಾನರ್ ಬಗ್ಗೆ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಟಿ 20 ಸಮಯದಲ್ಲಿ “ನಾವು ನಿಮ್ಮನ್ನು ಮಿಸ್ ಎಂಎಸ್ ಧೋನಿ” ಎಂದು ಬ್ಯಾನರ್‌ನಲ್ಲಿನ ಸಂದೇಶಕ್ಕೆ ಕೊಹ್ಲಿ ಪ್ರತಿಕ್ರಿಯಿಸಿದ್ದು, ತಾವು ಕೂಡ ಧೋನಿಯನ್ನು ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.ವಿರಾಟ್ ಕೊಹ್ಲಿ ಮತ್ತು ಎಂ.ಎಸ್.ಧೋನಿ ಅವರು ಮೈದಾನದಲ್ಲಿ ಮತ್ತು ಹೊರಗೆ ಉತ್ತಮ ಸಂಬಂಧ ಹೊಂದಿದ್ದಾರೆ.

https://twitter.com/DHONIism/status/1335919935080394752?ref_src=twsrc%5Etfw%7Ctwcamp%5Etweetembed%7Ctwterm%5E1335921032075436032%7Ctwgr%5E%7Ctwcon%5Es2_&ref_url=https%3A%2F%2Fwww.indiatoday.in%2Fsports%2Fcricket%2Fstory%2Faustralia-vs-india-ms-dhoni-fans-scg-banner-virat-kohli-viral-reaction-me-too-1747608-2020-12-08

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights