ರಾಜಸ್ಥಾನ ಚುನಾವಣೆ: ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ; ಕಾಂಗ್ರೆಸ್‌ಗೆ ಮುಖಭಂಗ?

ರಾಜಸ್ಥಾನದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. ರಾಜ್ಯದ 33 ಜಿಲ್ಲೆಗಳ ಪೈಕಿ 21 ಜಿಲ್ಲೆಗಳಲ್ಲಿ ಚುನಾವಣೆ ನಡೆದಿದ್ದು, 21 ಜಿಲ್ಲಾ ಪರಿಷತ್‌ ಅಥವಾ ಜಿಲ್ಲಾ ಮಂಡಳಿಗಳಲ್ಲಿ 13ರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಜಿಲ್ಲಾ ಪರಿಷತ್ತಿನ 636 ಸ್ಥಾನಗಳಲ್ಲಿ ಬಿಜೆಪಿ 266 ಸ್ಥಾನಗಳನ್ನು ಗೆದ್ದಿದ್ದು, 204 ಸ್ಥಾನಗಳಲ್ಲಿ ಕಾಂಗ್ರೆಸ್‌ ಜಯಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂತೆಯೇ, 4,371 ಪಂಚಾಯತ್ ಸಮಿತಿ ಸ್ಥಾನಗಳಲ್ಲಿ ಬಿಜೆಪಿ ಈಗಾಗಲೇ 1,835 ಸ್ಥಾನಗಳನ್ನು ಗಳಿಸಿದೆ ಮತ್ತು ಕಾಂಗ್ರೆಸ್ 1,718 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ ಎಂದು ಅಧಿಕಾರಿ ಹೇಳಿದರು, ಇತರ ವಿಜೇತರಲ್ಲಿ 420 ಸ್ವತಂತ್ರ ಅಭ್ಯರ್ಥಿಗಳು ಮತ್ತು  ರಾಷ್ಟ್ರೀಯ ಲೋಕ್‌ತಾಂತ್ರಿಕ್‌ ಪಕ್ಷದ 56 ಅಭ್ಯರ್ಥಿಗಳು ಜಯಗಳಿಸಿದ್ದಾರೆ.

“ಪಂಚಾಯತ್ ಸಮಿತಿಗಳು ಮತ್ತು ಜಿಲಾ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಮತ ಎಣಿಕೆ ಇನ್ನೂ ನಡೆಯುತ್ತಿದೆ” ಎಂದು ರಾಜ್ಯ ಚುನಾವಣಾ ಆಯೋಗದ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: ರೈತರೊಂದಿಗೆ ಅಮಿತ್‌ ಶಾ ಮಾತುಕತೆ ವಿಫಲ; ಇಂದು ನಡೆಯಬೇಕಿದ್ದ ಸಭೆ ರದ್ದು!

ಏತನ್ಮಧ್ಯೆ, ಸಿಕಾರ್ ಜಿಲ್ಲೆಯ ಫತೇಪುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಚುನಾವಣಾ ವಿಜಯ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ಜನರ ನಡುವೆ ಗುಂಪು ಘರ್ಷಣೆ ನಡೆದಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ.

ಮೃತವ್ಯಕ್ತಿಯನ್ನು ಕನ್ಹಯ್ಯ ಲಾಲ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಗಾಯಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಫಲಿತಾಂಶವು ಜಿಲ್ಲಾ ಪರಿಷತ್ ಚುನಾವಣೆಯಲ್ಲಿ 1,778 ಅಭ್ಯರ್ಥಿಗಳು ಮತ್ತು ಪಂಚಾಯತ್ ಸಮಿತಿ ಚುನಾವಣೆಯಲ್ಲಿ 12,663 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸುತ್ತದೆ.

ನವೆಂಬರ್ 23 ಮತ್ತು 27 ಮತ್ತು ಡಿಸೆಂಬರ್ 1 ಮತ್ತು 5 ರಂದು ನಾಲ್ಕು ಹಂತದಲ್ಲಿ ಚುನಾವಣೆ ನಡೆದಿತ್ತು.


ಇದನ್ನೂ ಓದಿ: ರಮೇಶ್ ಕುಮಾರ್ ರಾಜಕೀಯ ನಿವೃತ್ತಿ ಎಂಬ ವದಂತಿ; ಸ್ಪಷ್ಟನೆ ನೀಡಿದ ಮಾಜಿ ಸ್ಪೀಕರ್!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights