ಗ್ರಾಮ ಪಂಚಾಯ್ತಿ ಸ್ಥಾನ ಹರಾಜು ಪ್ರಕರಣ : 44 ಮಂದಿ ವಿರುದ್ಧ ಎಫ್ಐಆರ್!

ದಿನಕಳೆದಂತೆ ಗ್ರಾಮ ಪಂಚಾಯ್ತಿ ಚುನಾವಣೆಯ ಕಾವು ರಂಗೇರುತ್ತಿದೆ. ಇದರ ಮಧ್ಯೆ ಮಂಡ್ಯದಲ್ಲಿ ಗ್ರಾಮ ಪಂಚಾಯ್ತಿಗಳಲ್ಲಿ ಅಭ್ಯರ್ಥಿಗಳು ಸ್ಥಾನವನ್ನು ಹರಾಜು ಹಾಕಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 44 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಹೌದು.. ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಪ್ರಕಟವಾಗುತ್ತಿದ್ದಂತೆ ಇಂಥಹದೊಂದು ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡತೊಡಗಿತ್ತು. ಬಿಡ್ ಮೂಲಕ ಲಕ್ಷಾಂತರ ರೂಪಾಯಿಗೆ ಗ್ರಾಮ ಪಂಚಾಯ್ತಿ ಸ್ಥಾನವನ್ನು ಲಾಳನಕೆರೆ ಗ್ರಾಮಸ್ಥರು ಹರಾಜು ಹಾಕಿದ್ದರು.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಲಾಳನಕೆರೆಯಲ್ಲಿ ನಡೆದ ಈ ಹರಾಜಿನ ವಿರುದ್ಧ ಸಾಕಷ್ಟು ವಿರೋಧ ವ್ಯಕ್ತವಾಗುವುದು ಮಾತ್ರವಲ್ಲದೇ ಕ್ರಮಕ್ಕೆ ಆಗ್ರಹಿಸಲಾಗಿತ್ತು.

ದೇವಸ್ಥಾನದ ನಿರ್ಮಾಣ ಹಾಗೂ ಗ್ರಾಮದ ಅಭಿವೃದ್ಧಿ ಹೆಸರಿನಲ್ಲಿ ಮೂರು ಸ್ಥಾನಗಳಿಗೆ ಒಟ್ಟು 17.40 ಲಕ್ಷ ರೂ.ಗೆ ಈ ಹರಾಜು ಪ್ರಕ್ರಿಯೆ ನಡೆದಿತ್ತು. ಈ ಸಂಬಂಧ ಗ್ರಾಮಕ್ಕೆ ಭೇಟಿ ನೀಡಿದ ಻ಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದರು. ಸದ್ಯ ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾದ 44 ಮಂದಿ ವಿರುದ್ಧ ಬಿಂಡಿಗನವಿಲೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಡಿಸೆಂಬರ್ 22 ಮತ್ತು 27 ರಂದು ಗ್ರಾಪಂ ಚುನಾವಣೆ ನಡೆಯಲಿದ್ದು, ಡಿಸೆಂಬರ್ 30ರಂದು ಫಲಿತಾಂಶ ಹೊರಬೀಳಲಿದೆ. ಒಟ್ಟು 5,762 ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಮೊದಲ ಹಂತದಲ್ಲಿ 2,930 ಗ್ರಾಮ ಪಂಚಾಯತಿಗಳಿಗೆ ಮತದಾನ ನಡೆದರೆ, ಎರಡನೇ ಹಂತದಲ್ಲಿ 2,832 ಗ್ರಾಮ ಪಂಚಾಯತಿಗಳಿಗೆ ಮತದಾನ ನಡೆಯಲಿದೆ. ಬೀದರ್ ಜಿಲ್ಲೆ ಹೊರತುಪಡಿಸಿ ಉಳಿದ ಕಡೆ ಮತಪತ್ರಗಳ ಮೂಲಕ ಚುನಾವಣೆ ನಡೆಯಲಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights